ತುಮಕೂರು: ವಿಚಾರಣೆಗಾಗಿ ವಶಪಡಿಸಿಕೊಂಡಿದ್ದ ಕಾರನ್ನು ಹಿಂದಿರುಗಿಸಲು ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ ನಡೆಸಿದೆ. ಗುಬ್ಬಿ ತಾಲೂಕಿನ ಸಿ.ಎಸ್.ಪುರ ಠಾಣೆಯ ಪಿಎಸ್ಐ ಮತ್ತು ಹೆಡ್ ಕಾನ್ಸ್‌ಟೇಬಲ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ಗುಬ್ಬಿ ತಾಲೂಕಿನ ಸಿ.ಎಸ್.ಪುರ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಸೆ.22ರಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿ.ಎಸ್.ಪುರ ಠಾಣೆಯಲ್ಲಿ ಚಂದ್ರಣ್ಣ ಎಂಬುವವರ ಮೇಲೆ ದೂರು ದಾಖಲಾಗಿತ್ತು. ಈ ಸಂಬಂಧ ವಿಚಾರಣೆಗಾಗಿ ಅವರ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಅವರು ಜಾಮೀನು ಪಡೆದು ಹೊರ ಬಂದಿದ್ದಾರೆ.
ಈ ನಡುವೆ ಕಾರನ್ನು ವಾರಸುದಾರರಿಗೆ ಠಾಣೆಯಿಂದ ಹಿಂದಿರುಗಿಸಲು ಪಿಎಸ್ಐ ಸೋಮಶೇಖರ್ ಹೆಡ್ ಕಾನ್ಸ್‌ಟೇಬಲ್ ನಯಾಜ್ ಅಹಮ್ಮದ್ ಎಂಬುವವರ ಮಧ್ಯಸ್ಥಿಕೆಯಲ್ಲಿ 28 ಸಾವಿರಕ್ಕೆ ಲಂಚದ ಬೇಡಿಕೆ ಇಟ್ಟಿದ್ದರಂತೆ. ಇದರಂತೆ ಈಗಾಗಲೇ 12 ಸಾವಿರ ರೂ. ಮುಂಗಡ ಹಣ ಪಡೆದಿದ್ದಾರೆ. ಇಂದು ಉಳಿದ 16 ಸಾವಿರ ಹಣ ಪಡೆಯುತ್ತಿದ್ದ ವೇಳೆ ತುಮಕೂರಿನ ಎಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಳ್ಳಲು ನಯಾಜ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದರು. ಕೂಡಲೇ ಪೊಲೀಸರು ರಸ್ತೆಯಲ್ಲಿಯೇ ಬೆನ್ನಟ್ಟಿಕೊಂಡು ಹೋಗಿ ವಶಕ್ಕೆ ಪಡೆದರು.
ಇದನ್ನೂ ಓದಿ: ರಾಜ್ಯದ ಪ್ರಮುಖ ನಿರ್ಮಾಣ ಸಂಸ್ಥೆ ಮೇಲೆ ಐಟಿ ದಾಳಿ: 70 ಕೋಟಿ ರೂ. ಲೆಕ್ಕಕ್ಕೆ ಸಿಗದ ಆದಾಯ ಪತ್ತೆ