ಕರ್ನಾಟಕ

karnataka

ETV Bharat / state

ಲಂಚ ಸ್ವೀಕರಿಸುತ್ತಿದ್ದ ಪಬ್ಲಿಕ್​​ ಪ್ರಾಸಿಕ್ಯೂಟರ್​​​​​ ಎಸಿಬಿ ಬಲೆಗೆ - undefined

ತಿಪಟೂರು ಮುನಿಸಿಪಲ್​ ನ್ಯಾಯಾಲಯದ ಪೂರ್ಣಿಮಾ ಜಿ. ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದಾರೆ. ಕೆಇ‌ಬಿ‌ ಎಂಜಿನಿಯರ್ ಗುರುಬಸವಸ್ವಾಮಿ ಎಂಬವರಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್

By

Published : Apr 30, 2019, 12:55 PM IST

ತುಮಕೂರು: ಕಕ್ಷಿದಾರಿಂದ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಪಬ್ಲಿಕ್ ಪ್ರಾಸಿಕ್ಯೂಟರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ. ತಿಪಟೂರು ನ್ಯಾಯಾಲಯ ಆವರಣದಲ್ಲಿ ಎಸಿಬಿ ದಾಳಿಗೆ ಸಿಲುಕಿದ್ದಾರೆ.

ತಿಪಟೂರು ಮುನಿಸಿಪಲ್​​ ನ್ಯಾಯಾಲಯದ ಪೂರ್ಣಿಮಾ ಜಿ. ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದಾರೆ. ಕೆಇ‌ಬಿ‌ ಎಂಜಿನಿಯರ್ ಗುರುಬಸವಸ್ವಾಮಿ ಎಂಬವರಿಂದ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 40,000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. 20 ಸಾವಿರ ಅಕೌಂಟ್ ಮೂಲಕ ಪಡೆದಿದ್ದರು. ಇನ್ನುಳಿದ 20 ಸಾವಿರ ಹಣ ನೇರವಾಗಿ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಎಪಿಪಿ ಕಚೇರಿಯಲ್ಲೇ ನಿನ್ನೆ ರಾತ್ರಿ 10.30ರವೆರೆಗೆ ವಿಚಾರಣೆ ನಡೆಸಿದ ಎಸಿಬಿ ಅಧಿಕಾರಿಗಳು. 2015ರಲ್ಲಿ ವಿದ್ಯುತ್ ಕಂಬ ವೃದ್ಧೆ ಮೇಲೆ ಬಿದ್ದು ಕಾಲು ತುಂಡಾಗಿತ್ತು. ಈ ಪ್ರಕರಣದ ವಕಾಲತ್ತುನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ವಹಿಸಿದ್ದರು. ನಿನ್ನೆ ನ್ಯಾಯಾಲಯದಲ್ಲಿ ಖುಲಾಸೆಗೊಂಡಿತ್ತು. ಮೇಲ್ಮನವಿ ಸಲ್ಲಿಸದಿರಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

For All Latest Updates

TAGGED:

ABOUT THE AUTHOR

...view details