ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಂದ್ರ ಬಾವಿ ಗ್ರಾಮದ ಬಳಿ ನಡೆದಿದೆ.
ಮಧುಗಿರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರ ದುರ್ಮರಣ - ತುಮಕೂರು ಲೆಟೆಸ್ಟ್ ನ್ಯೂಸ್
ಬೆಂಗಳೂರಿನಿಂದ ಪಾವಗಡಕ್ಕೆ ಕಾರಿನಲ್ಲಿ ಏಳು ಮಂದಿ ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೃತಪಟ್ಟಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿ....ಮೂವರು ಮೃತ
ಮೃತರನ್ನು ನರಸಮ್ಮ (35), ದುರ್ಗಪ್ಪ (22), ನರಸಿಂಹಮೂರ್ತಿ (32) ಎಂದು ಗುರುತಿಸಲಾಗಿದೆ. ನಿಂತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಪಾವಗಡಕ್ಕೆ ಕಾರಿನಲ್ಲಿ ಏಳು ಮಂದಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸದ್ಯ ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Sep 19, 2020, 12:43 PM IST