ಕರ್ನಾಟಕ

karnataka

ETV Bharat / state

ಪಾವಗಡದಲ್ಲಿ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು: ಚಾಲಕ ಸ್ಥಳದಲ್ಲೇ ಸಾವು - Accident in tumkur

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ. ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸ್ಥಳದಲ್ಲೇ ಚಾಲಕ ಸಾವು
ಸ್ಥಳದಲ್ಲೇ ಚಾಲಕ ಸಾವು

By

Published : Apr 26, 2020, 7:05 PM IST

ತುಮಕೂರು: ಪಾವಗಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ.

ದೇವರ ಹಟ್ಟಿ ಗ್ರಾಮದ ಉಮೇಶ್(28) ಮೃತ ವ್ಯಕ್ತಿ. ಕಾರಿನಲ್ಲಿದ್ದವರು ತಮ್ಮ ಗ್ರಾಮದಿಂದ ಕರಿಯಮ್ಮನ ಪಾಳ್ಯ ಗ್ರಾಮಕ್ಕೆ ಬಂದು ಅಲ್ಲಿಂದ ಸಮೀಪದ ಕೋಟಗುಡ್ಡ ಗ್ರಾಮಕ್ಕೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುಂಡಿಗೆ ಬಿದ್ದಿದೆ.

ಕಾರಿನಲ್ಲಿದ್ದ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details