ತುಮಕೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕುರುಬರಾಮನಹಳ್ಳಿ ಗೇಟ್ ಬಳಿ ನಡೆದಿದೆ.
ಶಿರಾ ಬಳಿ ಕಾರು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು - ಕಾರು ಮರಕ್ಕೆ ಡಿಕ್ಕಿ
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕುರುಬರಾಮನಹಳ್ಳಿ ಗೇಟ್ ಬಳಿ ನಡೆದಿದೆ.
ಕಾರು ಮರಕ್ಕೆ ಡಿಕ್ಕಿ
ಮೃತರನ್ನು ಹನುಮಂತರಾಯಪ್ಪ (38), ಪವನ್ (30) ಎಂದು ಗುರುತಿಸಲಾಗಿದೆ. ಕಿರಣ್, ಪ್ರಶಾಂತ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇವರೆಲ್ಲಾ ಬೆಂಗಳೂರಿನಿಂದ ಅಮರಪುರಕ್ಕೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಸದ್ಯ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.