ತುಮಕೂರು:ಜಿಲ್ಲೆಯಲ್ಲಿ ಅಗತ್ಯವಿರುವ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಂಗ್ರಹವಿದೆ. ಆದ್ರೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಅನಗತ್ಯವಾಗಿ ಆಕ್ಸಿಜನ್ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸಿಕೊಳ್ಳದಿದ್ದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಅನಗತ್ಯವಾಗಿ ಆಕ್ಸಿಜನ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಆರೋಗ್ಯ ಇಲಾಖೆ ಎಚ್ಚರಿಕೆ - Action against private hospitals that provide unnecessary oxygen
ತುಮಕೂರು ಜಿಲ್ಲೆಯಲ್ಲಿ ಅನಗತ್ಯವಾಗಿ ಆಕ್ಸಿಜನ್ ನೀಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.
ಆರೋಗ್ಯ ಇಲಾಖೆ ಎಚ್ಚರಿಕೆ
ಈಟಿವಿ ಭಾರತದ ಜೊತೆ ಮಾತನಾಡಿದ ಅವರು, 300ರಿಂದ 400 ಜನ ಸೋಂಕಿತರಿಗೆ ರೆಮ್ಡೆಸಿವಿರ್ ನೀಡುವ ಪರಿಸ್ಥಿತಿ ನಿರ್ಮಾಣವಾಗಬಹುದು. ಖಾಸಗಿ ಮತ್ತು ಸರ್ಕಾರಿ ವಲಯದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ನೀಡಲು ಪೂರಕವಾಗಿ ಸರ್ಕಾರದಿಂದ ಸರಬರಾಜು ಆಗಿದೆ. ಆದ್ರೆ ಅನಗತ್ಯವಾಗಿ ರೆಮ್ಡೆಸಿವರ್ ನೀಡಲು ಖಾಸಗಿ ಆಸ್ಪತ್ರೆಗಳು ಆರಂಭಿಸಿದರೆ ಅಭಾವ ಸೃಷ್ಟಿಯಾಗಲಿದೆ. ಅದನ್ನು ಅನಗತ್ಯವಾಗಿ ಉಪಯೋಗಿಸಬಾರದು ಎಂದು ಹೇಳಿದ್ದಾರೆ.