ತುಮಕೂರು :ಬಿಜಿಎಸ್ ವೃತ್ತದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿ ನಿರ್ಮಾಣದ ಜೊತೆಗೆ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿಯನ್ನು ನಿರ್ಮಿಸಲು ಎಲ್ಲರೂ ಒಂದಾಗಬೇಕಿದೆ ಎಂದು ಶಾಸಕ ಗೌರಿಶಂಕರ್ ತಿಳಿಸಿದರು.
ಕೆಂಪೇಗೌಡರ ಪುತ್ಥಳಿ ನಿರ್ಮಿಸಲು ಎಲ್ಲರೂ ಒಂದಾಗಬೇಕಿದೆ.. ಶಾಸಕ ಗೌರಿಶಂಕರ್
ನಾವು ಒಂದು ನಿಯೋಗವನ್ನು ರಚನೆ ಮಾಡಿಕೊಂಡು, ಈಗಿನ ಆದಿಚುಂಚನಗಿರಿ ಪೀಠಾಧ್ಯಕ್ಷರನ್ನು ಭೇಟಿ ಮಾಡಿ ಸ್ವಾಮೀಜಿಯವರ ಮೂಲಕ ಸರ್ಕಾರಕ್ಕೆ ಈ ಬಗ್ಗೆ ಮನವಿಯನ್ನು ಸಲ್ಲಿಸೋಣ..
ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಶಾಸಕ ಗೌರಿಶಂಕರ್ ಅವರ ಅಧ್ಯಕ್ಷತೆಯಲ್ಲಿ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರ ಜಯಂತಿ ಆಚರಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ಗೌರಿಶಂಕರ್, ಮಹಾನಗರ ಪಾಲಿಕೆ ಬಳಿಯ ಬಿಜಿಎಸ್ ವೃತ್ತದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪುತ್ಥಳಿ ನಿರ್ಮಾಣ ಮಾಡುವ ಜೊತೆಗೆ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿಯನ್ನು ನಿರ್ಮಿಸಲು ಈಗಾಗಲೇ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಯುಕ್ತರ ಹಾಗೂ ಸದಸ್ಯರ ಜೊತೆ ಚರ್ಚೆ ನಡೆಸಲಾಗಿದೆ. ಅವರ ಒಪ್ಪಿಗೆಯನ್ನು ಪಡೆಯಲಾಗಿದೆ ಎಂದು ತಿಳಿಸಿದರು.
ನಾವು ಒಂದು ನಿಯೋಗವನ್ನು ರಚನೆ ಮಾಡಿಕೊಂಡು, ಈಗಿನ ಆದಿಚುಂಚನಗಿರಿ ಪೀಠಾಧ್ಯಕ್ಷರನ್ನು ಭೇಟಿ ಮಾಡಿ ಸ್ವಾಮೀಜಿಯವರ ಮೂಲಕ ಸರ್ಕಾರಕ್ಕೆ ಈ ಬಗ್ಗೆ ಮನವಿಯನ್ನು ಸಲ್ಲಿಸೋಣ. ಆ ಮೂಲಕ ಬಿಜಿಎಸ್ ವೃತ್ತದಲ್ಲಿ ಪುತ್ಥಳಿ ನಿರ್ಮಿಸಲು ಸ್ಥಳ ನೀಡಿದರೆ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ನಾಡಪ್ರಭು ಕೆಂಪೇಗೌಡ ಅವರ ಪುತ್ಥಳಿ ನಿರ್ಮಿಸೋಣ ಎಂದರು.