ಕರ್ನಾಟಕ

karnataka

ETV Bharat / state

ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ: ಜಿ ಪರಮೇಶ್ವರ್​​​ - ಕೊರಟಗೆರೆ ಹಾಗೂ ಮಧುಗಿರಿ ಕ್ಷೇತ್ರ

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್​ ಅವರಿಂದು ತುಮಕೂರಿನಲ್ಲಿ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದವರಿಗೆ ಅಭಿನಂದನೆ ಸಲ್ಲಿಸಿದರು.

all-surveys-are-not-true-for-all-time-dr-g-parameshwar
ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ: ಡಾ.ಜಿ ಪರಮೇಶ್ವರ್​​​

By

Published : May 11, 2023, 5:19 PM IST

Updated : May 11, 2023, 5:47 PM IST

ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್​ ತುಮಕೂರಿನಲ್ಲಿ ಮಾತನಾಡಿದರು

ತುಮಕೂರು:ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ, ಕೆಲವೊಮ್ಮೆ ನಿಜವಾಗಿದೆ, ಕೆಲವೊಮ್ಮೆ ಸುಳ್ಳಾಗಿದೆ. ಆದರೂ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರುವುದು ಸಾಬೀತಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು 130 ಸ್ಥಾನ ಪಡೆಯುತ್ತೇವೆ. ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ಧರಾಗಿದ್ದೇವೆ. ಸಿದ್ದರಾಮಯ್ಯ ಕೂಡ ವರುಣಾದಲ್ಲಿ ಯಾವುದೇ ತೊಂದರೆ ಇಲ್ಲದೇ ಗೆಲ್ಲುತ್ತಾರೆ. ನಾನು ಕೂಡ ಕೊರಟಗೆರೆಯಲ್ಲಿ ಹಿಂದಿನಗಿಂತ ಹೆಚ್ಚಿನ ಬಹುಮತದಲ್ಲಿ ಗೆಲ್ಲುತ್ತೇನೆ. 2013ರಲ್ಲಿ ನಾನು 120 ಸೀಟ್ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ 122 ಸ್ಥಾನ ಬಂದಿತ್ತು. ಈಗ ನಾನು 130 ಸ್ಥಾನ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದರು.

ಸಿಎಂ ಆಯ್ಕೆ ವಿಚಾರ ಹೈಕಮಾಂಡ್​​ಗೆ ಬಿಟ್ಟಿದ್ದು:ಮುಖ್ಯಮಂತ್ರಿ ಆಯ್ಕೆ ವಿಚಾರವನ್ನುಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಶಾಸಕರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈ ಸಂದರ್ಭದಲ್ಲಿ ಯಾರು ಒಳ್ಳೆಯ ಉತ್ತಮ ಆಡಳಿತ ಕೊಡುತ್ತಾರೋ ಅಂತವರನ್ನು ಹೈಕಮಾಂಡ್ ಸಿಎಂ ಮಾಡಬಹುದು ಎಂದರು. ನಾನು ಸಿಎಂ ಆಗಬೇಕು ಎಂದು ಜಿಲ್ಲೆಯ ಅಭಿಮಾನಿಗಳ ಅಪೇಕ್ಷೆ ಇದೆ, ಆದರೆ ಅದು ಸಾಧ್ಯ ಆಗೋದಿಲ್ಲ. ರಾಜ್ಯದ ವಿಧಾನಸಭಾ ಚುನಾವಣೆ ಬಹಳ ಪ್ರತಿಷ್ಠಿತವಾಗಿ ಈ ಬಾರಿ ನಡೆದಿದೆ. ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದೇವು. ಇಂದು ಆ ವಾತಾವರಣ ಕಂಡು ಬಂದಿದೆ ಎಂದು ಪರಮೇಶ್ವರ್​ ತಿಳಿಸಿದರು.

ಜಿಲ್ಲೆಯಲ್ಲಿ ರಾಜಕೀಯ ಪ್ರಜ್ಞೆ ಹೆಚ್ಚಿದ್ದು, ನಮ್ಮ ಜಿಲ್ಲೆಯಲ್ಲಿ ಬಹಳ ಚೆನ್ನಾಗಿ ಮತದಾನ ಆಗಿದೆ. ಕೊರಟಗೆರೆ ಹಾಗೂ ಮಧುಗಿರಿ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಹಳ ಜನರು ಮತ ಹಾಕದವರು ಈ ಬಾರಿ‌ ಮತದಾನ ಮಾಡಿದ್ದಾರೆ. ಹೊಸಬರು ಕೂಡ ಮತದಾನ ಮಾಡಿದ್ದಾರೆ. ಶೇ.18-20ರಷ್ಟು ಹೊಸಬರು ಮತದಾನ ಮಾಡಿದ್ದಾರೆ ಎಂದು ಜಿಲ್ಲೆಯ, ರಾಜ್ಯದ ಮತದಾರರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದವರಿಗೆ ಪರಮೇಶ್ವರ್ ಅವರು ಅಭಿನಂದನೆ ಸಲ್ಲಿಸಿದರು.

ಐದು ಗ್ಯಾರಂಟಿ ನೀಡಿರುವ ಭರವಸೆ ಮೇಲೆ ಮತದಾರರು ಮತದಾನ ಮಾಡಿರಬಹುದು. ನಾವು ಸರ್ಕಾರ ರಚಿಸಿದ ಬಳಿಕ ಐದು ಗ್ಯಾರೆಂಟಿಗಳನ್ನ ಜಾರಿ ಮಾಡುವ ನಿಟ್ಟಿನಲ್ಲಿ ಮೊದಲ ಕ್ಯಾಬಿನೆಟ್​​​ನಲ್ಲಿ ತೀರ್ಮಾನ ಮಾಡುತ್ತೇವೆ. ಈ ಚುನಾವಣೆ ಹೊಸ ರೀತಿಯಲ್ಲಿ ವಿಭಿನ್ನವಾಗಿದೆ. ಜನರು ಪ್ರಜಾಪ್ರಭುತ್ವದಲ್ಲಿ ಭಾಗಿಯಾಗೋದು ಒಳ್ಳೆಯ ಬೆಳವಣಿಗೆ. ನಮ್ಮ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಜರಂಗದಳ ಬ್ಯಾನ್ ಅನ್ನೋ ಭರವಸೆಗೆ ಬದ್ಧವಾಗಿರುತ್ತೀರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಸಮಾಜದ ಸ್ವಾಸ್ತ್ಯ ಹಾಳು ಮಾಡುತ್ತಾರೆ. ಅಂತಹ ಸಂಘಟನೆಗಳ ವಿರುದ್ಧ ಸಂವಿಧಾನದ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದೀವಿ. ಬಜರಂಗದಳ ಒಂದು ಸಂಘಟನೆ. ಇದಕ್ಕೂ ಭಜರಂಗಿಗೂ ಏನು ಸಂಬಂಧ ?. ಬಿಜೆಪಿಯವರು ಭಾವನಾತ್ಮಕವಾಗಿ ಬೇಕು ಅಂತಾ ಬಳಸಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ದೇಶದ ಅತ್ಯುತ್ತಮ ಹೈ ಸ್ಟ್ರೀಟ್​ ಪಟ್ಟಿಯಲ್ಲಿ ಬೆಂಗಳೂರಿನ ಎಂಜಿ ರೋಡ್​​ಗೆ ಮೊದಲ ಸ್ಥಾನ

Last Updated : May 11, 2023, 5:47 PM IST

ABOUT THE AUTHOR

...view details