ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿರುವುದನ್ನು ಬಿಜೆಪಿ ಕಾರ್ಯಕರ್ತರು ನಮಗೆ ವೀಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿ ವಿರುದ್ಧ ಹಣ ಹಂಚಿಕೆ ಆರೋಪ....ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದ ಡಿಕೆಶಿ - distribution of funds by BJP
ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ಮತದಾರರಿಗೆ ಬಿಜೆಪಿಯವರು ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಿಜೆಪಿಯಿಂದ ಹಣ ಹಂಚಿಕೆ ಆರೋಪ: ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆಂದ ಡಿಕೆಶಿ
ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಡಿಕೆಶಿ, ಕ್ಷೇತ್ರದಲ್ಲಿ ತಾಂಡಗಳನ್ನು ರೆವಿನ್ಯೂ ಗ್ರಾಮಗಳನ್ನಾಗಿ ಪರಿವರ್ತಿಸಿರುವ ಮತ್ತು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಟಿ.ಬಿ. ಜಯಚಂದ್ರ ಅವರು ಈ ಬಾರಿ ಗೆಲ್ಲಲೇಬೇಕಿದೆ ಎಂದು ತಿಳಿಸಿದರು.
Last Updated : Oct 27, 2020, 3:14 PM IST