ತುಮಕೂರು:ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ತಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಕ್ಕೆ ಸೇರಿದ ಜಮೀನನ್ನು ವಿಶೇಷ ಭೂಸ್ವಾಧೀನಾಧಿಕಾರಿಗಳು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಅವರು ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು ಇದನ್ನು ತಡೆ ಹಿಡಿಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರೈತರು ಮೌನ ಪ್ರತಿಭಟನೆ ನಡೆಸಿದರು.
ಕೊರಟಗೆರೆಯಲ್ಲಿ ಅಕ್ರಮ ಭೂ ಕಬಳಿಕೆ ಆರೋಪ,ರೈತರಿಂದ ಮೌನ ಪ್ರತಿಭಟನೆ - ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ತಂಗನಹಳ್ಳಿ
ಕೊರಟಗೆರೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಮಂಜುನಾಥ್ ಎಂಬುವವರು ಚಾಮುಂಡೇಶ್ವರಿ ಟ್ರಸ್ಟ್ ರಚಿಸಿಕೊಂಡು ಅಕ್ರಮವಾಗಿ ಗೋಮಾಳದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಕೊರಟಗೆರೆಯಲ್ಲಿ ಅಕ್ರಮ ಭೂ ಕಬಳಿಕೆ ಆರೋಪ,ರೈತರಿಂದ ಮೌನ ಪ್ರತಿಭಟನೆ
ಮಂಜುನಾಥ್ ಎಂಬುವವರು ಸರ್ಕಾರದಿಂದ ಚಾಮುಂಡೇಶ್ವರಿ ಟ್ರಸ್ಟ್ಗಾಗಿ ನಾಲ್ಕು ಎಕರೆ ಜಮೀನು ಮಂಜೂರು ಮಾಡಿಸಿಕೊಂಡಿದ್ದು, ಸುತ್ತಮುತ್ತಲಿನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದರಿಂದ ಆ ಗ್ರಾಮದ ರೈತರಿಗೆ ಸಮಸ್ಯೆಯಾಗುತ್ತಿದ್ದು, ದನಕರುಗಳಿಗೆ ಮೇವು ಸಿಗದಂತಾಗಿ ರೈತರಿಗೆ ಓಡಾಡಲು ಜಾಗ ಇಲ್ಲದಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ಯಾವುದೇ ರೀತಿಯ ಸ್ಪಂದನೆ ದೊರೆತಿಲ್ಲ.ಹಾಗಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ರೈತ ಮುಖಂಡ ಶಂಕರ್ ತಿಳಿಸಿದ್ದಾರೆ.