ಕರ್ನಾಟಕ

karnataka

ಕೊರೊನಾ ಸೋಂಕಿತರನ್ನು ಸ್ಥಳಾಂತರಿಸಿದ ಬಳಿಕ ಆ್ಯಂಬುಲೆನ್ಸ್​ ಸಿಬ್ಬಂದಿಗೂ ಕ್ವಾರಂಟೈನ್​​​!

By

Published : May 9, 2020, 10:48 PM IST

ಕೊರೊನಾ ಸೋಂಕಿತರು, ಶಂಕಿತರನ್ನು ಕ್ವಾರಂಟೈನ್​ಗೆ ಸ್ಥಳಾಂತರಿಸಿದ್ರೆ ಆ್ಯಂಬುಲೆನ್ಸ್ ಚಾಲಕ ಮತ್ತು ವೈದ್ಯಕೀಯ ಸಿಬ್ಬಂದಿಯೊಬ್ಬರು ಕಡ್ಡಾಯವಾಗಿ ಕ್ವಾರಂಟೈನ್​​ನಲ್ಲಿ ಇರಬೇಕು.

Ambulance staff undergo 1 week quarantine
ಒಮ್ಮೆ ಕೊರೊನಾ ಸೋಂಕಿತರನ್ನು ಸ್ಥಳಾಂತರಿಸಿದರೆ 1 ವಾರ ಕ್ವಾರಂಟೇನ್​.!

ತುಮಕೂರು: ಕೋವಿಡ್-19 ಸೋಂಕಿತರು ಮತ್ತು ಶಂಕಿತರನ್ನು ಸ್ಥಳಾಂತರಿಸುವ ಕೆಲಸ ಮಾಡುವ 108 ಆ್ಯಂಬುಲೆನ್ಸ್​ ಸಿಬ್ಬಂದಿ ಒಂದು ವಾರ ಕ್ವಾರಂಟೈನ್​ನಲ್ಲಿರುತ್ತಾರೆ.

ಶಂಕಿತರನ್ನು ಕ್ವಾರಂಟೈನ್​ಗೆ ಸ್ಥಳಾಂತರಿಸಿದ್ರೆ ಆ್ಯಂಬುಲೆನ್ಸ್ ಚಾಲಕ ಮತ್ತು ವೈದ್ಯಕೀಯ ಸಿಬ್ಬಂದಿಯೊಬ್ಬರು ಕಡ್ಡಾಯವಾಗಿ ಕ್ವಾರಂಟೈನ್​ನಲ್ಲಿ ಇರಬೇಕು. ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸ್ ಸಿಬ್ಬಂದಿಯಂತೆ ಆ್ಯಂಬುಲೆನ್ಸ್ ಸಿಬ್ಬಂದಿ ಕೂಡ ನಿಯಮಗಳನ್ನು ಪಾಲಿಸಬೇಕಿರುವುದು ಅನಿವಾರ್ಯ. ಇದರಿಂದ 108 ಆ್ಯಂಬುಲೆನ್ಸ್ ಸಿಬ್ಬಂದಿ ತಮ್ಮ ಕುಟುಂಬದವರಿಂದ ದೂರ ಉಳಿಯುವಂತಹ ಸ್ಥಿತಿ ಉಂಟಾಗಿದೆ. ಕ್ವಾರೆಂಟೈನ್​​ ಸಮಯದಲ್ಲಿ ಉಳಿದುಕೊಳ್ಳಲು ಕೊಠಡಿ, ಊಟ, ಸ್ನಾನ ಇತ್ಯಾದಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಒಮ್ಮೆ ಕೊರೊನಾ ಸೋಂಕಿತರನ್ನು ಸ್ಥಳಾಂತರಿಸಿದರೆ 1 ವಾರ ಕ್ವಾರಂಟೈನ್​!

ಜಿಲ್ಲೆಯಲ್ಲಿ ಆ್ಯಂಬುಲೆನ್ಸ್​ ಸಿಬ್ಬಂದಿ ಕೊರೊನಾ ವೈರಸ್ ಸೋಂಕಿತರು, ಶಂಕಿತರನ್ನು ಜೀವದ ಹಂಗು ತೊರೆದು ಆಸ್ಪತ್ರೆಗೆ ಸ್ಥಳಾಂತರಿಸುವ ಕಾರ್ಯದಲ್ಲಿ ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ತಮ್ಮ ಮನೆ, ಕುಟುಂಬದ ಸದಸ್ಯರನ್ನು ಬಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿವಿಕೆ-ಇಎಂಆರ್​ಐನಿಂದ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಆ್ಯಂಬುಲೆನ್ಸ್​ಗಳು ತುಮಕೂರು ಜಿಲ್ಲೆಯಲ್ಲಿದ್ದು, ಇವುಗಳಲ್ಲಿ 8 ವಾಹನಗಳನ್ನು ಕೊರೊನಾ ಸೋಂಕಿತರು, ಅವರ ಕುಟುಂಬದವರನ್ನು ಕ್ವಾರಂಟೈನ್​ ಮಾಡಲು, ಆಸ್ಪತ್ರೆ ಸಿಬ್ಬಂದಿಯನ್ನು ಕರೆ ತರಲು ಬಳಸಿಕೊಳ್ಳಲಾಗುತ್ತಿದೆ.

ಸಮಾರೋಪಾದಿಯಲ್ಲಿ ಕಾರ್ಯ:

ಕೊರೊನಾ ಹೋರಾಟದಲ್ಲಿ ತೊಡಗಿಕೊಂಡಿರುವ ಆ್ಯಂಬುಲೆನ್ಸ್ ಸಿಬ್ಬಂದಿ 2 ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿ ವಾಹನದಲ್ಲಿ ಚಾಲಕ ಹಾಗೂ ಸಹಾಯಕ ನರ್ಸ್​ಗಳ ಸುರಕ್ಷತೆಗಾಗಿ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ಒಳಗೊಂಡಂತೆ ಸಾಕಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರೊಂದಿಗೆ ಸಹಕಾರಿಯಾಗಿ ನಿಂತಿರುವ ಆ್ಯಂಬುಲೆನ್ಸ್ ಸಿಬ್ಬಂದಿಗೂ ಸಹ ವಿಶೇಷ ತರಬೇತಿ ನೀಡಲಾಗಿದೆ. ಸೋಂಕಿತರನ್ನು ಕರೆ ತರುವಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ, ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡು ಸೋಂಕಿತರನ್ನು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುವ ಬಗ್ಗೆ ತರಬೇತಿ ನೀಡಲಾಗಿದೆ. ವೈರಸ್ ಸೋಂಕಿತರು ಹಾಗೂ ಶಂಕಿತರನ್ನು ಚಿಕಿತ್ಸೆ, ಸುರಕ್ಷತಾ ಜಾಗಕ್ಕೆ ಸಾಗಿಸುವಲ್ಲಿ ಆ್ಯಂಬುಲೆನ್ಸ್ ಸಿಬ್ಬಂದಿಯ ಕಾರ್ಯ ಶ್ಲಾಘನೀಯ. ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಳವಡಿಸಿಕೊಳ್ಳಲು ಸಿಬ್ಬಂದಿಗೆ ರಕ್ಷಾ ಕವಚವನ್ನು ನೀಡಲಾಗಿದೆ.

ABOUT THE AUTHOR

...view details