ತುಮಕೂರು:ಶುಕ್ರವಾರ(ನಾಳೆ) ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ಜರುಗಲಿದೆ. ಇದಕ್ಕೆ ಪೂರಕವಾಗಿ ಸಕಲ ವ್ಯವಸ್ಥೆಯನ್ನು ಮಠದ ಆವರಣದಲ್ಲಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಠಕ್ಕೆ ಭೇಟಿ ನೀಡಿ, ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಮಠಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸ್ವಾಗತಕ್ಕೆ ಸರ್ವತಯಾರಿ ಮಾಡಿಕೊಳ್ಳಲಾಗಿದೆ. ಕೆಲವರು ಉದ್ದೇಶಪೂರ್ವಕವಾಗಿ ಸಂಘಟನೆಗೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಬೆಂಗಳೂರಿನಲ್ಲಿ ಫುಟ್ ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವ ಒಂದು ಕೋಮಿನ ಜನರಿಗೆ ಬೆದರಿಕೆ ಒಡ್ಡುತ್ತಿದ್ದಾರೆ. ಇದನ್ನು ಕಾನೂನು ಮೂಲಕ ಹತ್ತಿಕ್ಕಲಾಗುವುದು ಎಂದು ತಿಳಿಸಿದರು.