ತುಮಕೂರು:ಜಿಲ್ಲೆಯ ಮಧುಗಿರಿ ತಾಲೂಕಿನ ಬುರುಗನಹಳ್ಳಿ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇಂದು ಮತ್ತೊಂದು ಚಿರತೆ ಬಿದ್ದಿದೆ.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮತ್ತೊಂದು ಚಿರತೆ - leopard that fell on the cage
ಜಿಲ್ಲೆಯ ಮಧುಗಿರಿ ತಾಲೂಕಿನ ಬುರುಗನಹಳ್ಳಿ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇಂದು ಮತ್ತೊಂದು ಚಿರತೆ ಬಿದ್ದಿದೆ.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಮತ್ತೊಂದು ಚಿರತೆ..!
ಬುರುಗನಹಳ್ಳಿ ಗ್ರಾಮದ ಬಳಿ ಇರುವ ಬೆಟ್ಟದ ಹತ್ತಿರ ಅರಣ್ಯ ಇಲಾಖೆ ವತಿಯಿಂದ ಮೂರು ಬೋನುಗಳನ್ನು ಇರಿಸಲಾಗಿತ್ತು. ನಿನ್ನೆ ಒಂದು ಚಿರತೆ ಬೋನಿನಲ್ಲಿ ಸೆರೆಯಾಗಿತ್ತು. ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಚಿರತೆ ಸೆರೆಯಾಗಿದೆ. ಗ್ರಾಮಸ್ಥರು ಬೆಟ್ಟದ ಸುತ್ತಲೂ ಮೂರು ಚಿರತೆಗಳು ಓಡಾಡುತ್ತಿವೆ. ಅವುಗಳನ್ನು ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಅರಣ್ಯ ಇಲಾಖೆ ವತಿಯಿಂದ ಮೂರು ಬೋನುಗಳನ್ನು ಇರಿಸಲಾಗಿತ್ತು.
ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಸುತ್ತಮುತ್ತಲ ಜನರು ತಂಡೋಪತಂಡವಾಗಿ ಆಗಮಿಸಿದ್ದರು.