ETV Bharat Karnataka

ಕರ್ನಾಟಕ

karnataka

ETV Bharat / state

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ - ಆಶಾಕಾರ್ಯಕರ್ತೆಯರ ಬೇಡಿಕೆಗೆ ಮನವಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಮೂಲಕ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Appeal to the government
ಮುರಳೀಧರ ಹಾಲಪ್ಪ
author img

By

Published : Jul 11, 2020, 5:30 PM IST

ತುಮಕೂರು:ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ತಮ್ಮ ಕೆಲಸವನ್ನು ಬಹಿಷ್ಕರಿಸಿದ್ದಾರೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಆಶಾ ಕಾರ್ಯಕರ್ತೆಯರ ಮುಖಂಡರನ್ನು ಕರೆದು ಸಭೆ ನಡೆಸಿ, ಅವರ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಗೊಳಿಸಬೇಕು ಎಂದು ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಮನವಿ ಮಾಡಿದರು.

ನಗರದ ರವೀಂದ್ರ ಕಲಾನಿಕೇತನದಲ್ಲಿ ವಿವಿಧ ಸಂಘ ಸಂಸ್ಥೆ ಹಾಗೂ ಸಂಘಟನೆಗಳ ಸದಸ್ಯರ ಜೊತೆ ಸಭೆ ನಡೆಸಿ, ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಮೂಲಕ ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ

ಈ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ, ರಾಜ್ಯ ಸರ್ಕಾರ ನೀಡುವ ಅಂಕಿ ಅಂಶದಂತೆ ರಾಜ್ಯದಲ್ಲಿ 41,468 ಜನ ಆಶಾ ಕಾರ್ಯಕರ್ತೆಯರಿದ್ದಾರೆ. ಅವರನ್ನು ಅವಲಂಬಿತರಾಗಿ 7ರಿಂದ 8ಲಕ್ಷ ಜನರಿದ್ದಾರೆ. ಅವರೆಲ್ಲರೂ ಕಳೆದ 4 ತಿಂಗಳಿನಿಂದಲೂ ಸಂಕಷ್ಟದಲ್ಲಿಯೇ ಇದ್ದಾರೆ. ಸೋಂಕಿತರ ಬಗ್ಗೆ ಸರ್ವೇ ಮಾಡುವುದರಿಂದ ಹಿಡಿದು, ಅವರಿಗೆ ಚಿಕಿತ್ಸೆ ದೊರೆತು ಗುಣಮುಖರಾಗುವವರೆಗೂ ಪ್ರತಿಯೊಂದು ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಹಾಯಕರು ಹೊಂದಿದ್ದಾರೆ ಎಂದರು.

ಆಶಾ ಕಾರ್ಯಕರ್ತೆಯರು ತಾವು ಮಾಡಿದ ಕೆಲಸದ ಬಗ್ಗೆ ಆಶಾ ಸಾಫ್ಟ್​​ವೇರ್​​​ನಲ್ಲಿ ಅಪ್ಲೋಡ್ ಮಾಡಿದರೆ ಮಾತ್ರ ಅವರಿಗೆ ಗೌರವಧನ ದೊರೆಯುತ್ತದೆ. ಅದರಲ್ಲಿಯೂ ಕೆಲವರಿಗೆ ಮಾತ್ರ 2,000 ರೂ. ಹಣ ದೊರೆತಿದ್ದು, ಹಲವರಿಗೆ 300ರಿಂದ 500 ರೂ. ಗೌರವಧನ ದೊರೆತಿದೆ. ಅದೂ ಸಹ ಎರಡು ಮೂರು ತಿಂಗಳಿಗೊಮ್ಮೆ. ಕೊರೊನಾ ಸಮಯದಲ್ಲಿ ಕುಟುಂಬವನ್ನು ಸಂಕಷ್ಟಕ್ಕೆ ದೂಡಿ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ಕೇಳುತ್ತಿರುವ ಮನವಿಯನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

ABOUT THE AUTHOR

...view details