ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದ ಬಿಸಿಎಂ ಇಲಾಖೆಯ ವಿಸ್ತರಣಾಧಿಕಾರಿ ದೌರ್ಜನ್ಯವೆಸಗಿದ್ದಾರೆಂದು ಆರೋಪಿಸಿ ವಸತಿ ನಿಲಯದ ವಿದ್ಯಾರ್ಥಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಯಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ - ವಿಸ್ತರ್ಣಾಧಿಕಾರಿಯಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ
ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸುಬ್ಬರಾಯ ಮತ್ತು ಅಳಿಯ ಪವನ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆ ವಿಡಿಯೋ
ಹಲ್ಲೆ ವಿಡಿಯೋ
ಪಾವಗಡ ಪಟ್ಟಣದ ಗುರುಭವನದ ಬಳಿಯ ಡಿ.ದೇವರಾಜ್ ಅರಸ್ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸುಬ್ಬರಾಯ ಮತ್ತು ಅಳಿಯ ಪವನ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿಗಳು ಗ್ರೂಪ್ ಸ್ಟಡಿ ಮಾಡುವ ವೇಳೆ ಮಾತನಾಡಿದ್ದಕ್ಕಾಗಿ ಸುಬ್ಬರಾಯ ಸಂಬಂಧಿ ಪವನ್, ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ಪಟ್ಟಣದ ಪೊಲೀಸ್ ಠಾಣೆಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.