ತುಮಕೂರು:ನಗರದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಹತ್ತು ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ಈ ಸಹಿ ಸಗ್ರಹದ ಪ್ರತಿಯನ್ನು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ಸಲ್ಲಿಸಲಾಗುವುದೆಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್ ಹೇಳಿದರು.
ಅತ್ಯಾಚಾರಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ: 10 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ - ಇತ್ತೀಚಿನ ತುಮಕೂರು ಸುದ್ದಿ
ಬಾಲಕಿ ಅತ್ಯಾಚಾರವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಹತ್ತು ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಿದ್ದು, ತುಮಕೂರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದೆಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅತಿಕ್ ಅಹಮದ್ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ನಗರದ ಈದ್ಗಾ ಮೊಹಲ್ಲಾದ ನಜರ್ ಉಲ್ಲಾ ಖಾನ್ ಎಂಬ ವ್ಯಕ್ತಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಇದನ್ನು ಖಂಡಿಸಿ ಮತ್ತು ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗಿದೆ. ಈ ಪತ್ರಗಳನ್ನು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ತಲುಪಿಸಲಾಗುವುದು ಎಂದರು. ಅಷ್ಟೇ ಅಲ್ಲದೇ, ನಾವೇ ಖುದ್ದಾಗಿ ಭೇಟಿ ಮಾಡಿ ಮನವಿ ಸಲ್ಲಿಸುತ್ತೇ ಎಂದರು.
ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಡೀ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಅತ್ಯಾಚಾರದಂತ ಕೃತ್ಯವೆಸಗುವವರಿಗೆ ಕಠಿಣ ಶಿಕ್ಷೆ ನೀಡುವುದರ ಜೊತೆಗೆ ಪೋಷಕರಿಗೆ ಮಕ್ಕಳ ರಕ್ಷಣೆ ಬಗ್ಗೆ ಅರಿವು ಮೂಡಿಸಿ ಧೈರ್ಯ ತುಂಬುವ ಕಾರ್ಯವನ್ನು ಪೊಲೀಸ್ ಇಲಾಖೆ ಮಾಡಬೇಕೆಂದು ಒತ್ತಾಯಿಸಿದರು.