ತುಮಕೂರು :ಈ ಹಿಂದೆ ರಾಜ್ಯಾದ್ಯಂತ ತಾಲೂಕು ಮಟ್ಟದ ಮತ್ತು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿತ್ತು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದ ಕ್ರೀಡಾಪಟುಗಳನ್ನು ರಾಜ್ಯಮಟ್ಟದಲ್ಲಿ ನಡೆಯುವಂತಹ ದಸರಾ ಕ್ರೀಡಾಕೂಟಕ್ಕೆ ಕಳುಹಿಸಿ ಕೊಡಲಾಗುತ್ತಿತ್ತು.
ಗ್ರಾಮೀಣ ಹಾಗೂ ಜಿಲ್ಲಾ ಮಟ್ಟದಲ್ಲೂ ದಸರಾ ಕ್ರೀಡಾಕೂಟ ಆಯೋಜಿಸಲು ಆಗ್ರಹ - ದಸರಾ ಕ್ರೀಡಾಕೂಟ
ರಾಜ್ಯ ಸರ್ಕಾರ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳನ್ನು ಸ್ಥಗಿತಗೊಳಿಸಿದ್ದು ಕೇವಲ ರಾಜ್ಯಮಟ್ಟಕ್ಕೆ ದಸರಾ ಕ್ರೀಡಾಕೂಟವನ್ನು ಸೀಮಿತಗೊಳಿಸಿದೆ. ಆದ್ರೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಈ ಕ್ರೀಡಾಕೂಟ ನಡೆಯಬೇಕೆಂದು ತುಮಕೂರಿನ ಕ್ರೀಡಾಪಟುಗಳು ಆಗ್ರಹಿಸಿದ್ದಾರೆ.
![ಗ್ರಾಮೀಣ ಹಾಗೂ ಜಿಲ್ಲಾ ಮಟ್ಟದಲ್ಲೂ ದಸರಾ ಕ್ರೀಡಾಕೂಟ ಆಯೋಜಿಸಲು ಆಗ್ರಹ](https://etvbharatimages.akamaized.net/etvbharat/prod-images/768-512-4030451-thumbnail-3x2-giri.jpg)
ದಸರಾ ಕ್ರೀಡಾಕೂಟ ಆಯೋಜಿಸಲು ಕ್ರೀಡಾಪಟುಗಳ ಆಗ್ರಹ
ದಸರಾ ಕ್ರೀಡಾಕೂಟ ಆಯೋಜಿಸಲು ಕ್ರೀಡಾಪಟುಗಳ ಆಗ್ರಹ
ಈ ಮೂಲಕ ತಾಲೂಕು ಕೇಂದ್ರಗಳಲ್ಲಿದ್ದ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಲಭಿಸುತ್ತಿತ್ತು. ಆದರೆ ಕಳೆದ ವರ್ಷದಿಂದ ದಸರಾ ಕ್ರೀಡಾಕೂಟವನ್ನು ಕೇವಲ ರಾಜ್ಯ ಮಟ್ಟಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಏಕಾಏಕಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಿಲ್ಲದಂತಾಗಿದೆ ಎಂದು ಕ್ರೀಡಾಪಟುಗಳು ತಮ್ಮ ಅಳಲನ್ನು ತೋಡಿಕೊಂಡರು.