ತುಮಕೂರು: ತುರುವೇಕೆರೆ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಅವರ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಹೆಬ್ಬೂರಿನಲ್ಲಿ ನಡೆದಿದೆ.
ತುಮಕೂರು: ಬಿಜೆಪಿ ಶಾಸಕನ ಪುತ್ರನ ಮೇಲೆ ಹಲ್ಲೆ ಯತ್ನ - ಬಿಜೆಪಿ ಶಾಸಕನ ಮಗನ ಮೇಲೆ ಹಲ್ಲೆಗೆ ಯತ್ನ
ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಅವರ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಲು ಯತ್ನಿಸಿದ್ದಾರೆ.
Attack on BJP MLA Masale Jayaram son in Tumkur
ದುಷ್ಕರ್ಮಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಾಗೂ ಚಾಕುವಿನಿಂದ ತೇಜು ಜಯರಾಮ್ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದರಂತೆ. ಈ ವೇಳೆ ಸ್ಥಳೀಯರು ದುಷ್ಕರ್ಮಿಗಳ ಮೇಲೆ ಪ್ರತಿದಾಳಿ ನಡೆಸಿ ಅವರು ಬಂದಿದ್ದ ವಾಹನವನ್ನು ಜಖಂಗೊಳಿಸಿದ್ದಾರೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ತೇಜು ಜಯರಾಮ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂದ ಹೆಬ್ಬೂರು ಪೊಲೀಸರು ವಾಹನವನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
Last Updated : Apr 7, 2021, 7:42 AM IST