ಕರ್ನಾಟಕ

karnataka

ETV Bharat / state

ತುಮಕೂರು: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ - Shira Police Station

ಶಿರಾ ತಾಲೂಕಿನ ಜಾನಕಲ್ ಗ್ರಾಮದ ಕೆರೆ ಅಂಗಳದಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಜೂಜುಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

attack on police who attacked gambling
ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಮಾರಣಾಂತಿಕವಾಗಿ ಹಲ್ಲೆ..!

By

Published : Apr 22, 2020, 1:06 PM IST

ತುಮಕೂರು: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಜೂಜುಕೋರರು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.

ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಮಾರಣಾಂತಿಕವಾಗಿ ಹಲ್ಲೆ..!

ಶಿರಾ ತಾಲೂಕಿನ ಜಾನಕಲ್ ಗ್ರಾಮದ ಕೆರೆ ಅಂಗಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಾಲ್ವರು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರನ್ನು ಕಂಡು ಜೂಜುಕೋರರು ಕಾಲ್ಕಿತ್ತಿದ್ದಾರೆ. ಹಿಂಬಾಲಿಸಿಕೊಂಡು ಹೋದ ಪೊಲೀಸ್ ಪೇದೆ ಮಂಜುನಾಥ್​ಗೆ, ಜೂಜುಕೋರರು ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ಘಟನೆಯಿಂದ ಶಿರಾ ಪೊಲೀಸ್ ಠಾಣೆಯ ಪೇದೆ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದು,ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಮಾರಣಾಂತಿಕವಾಗಿ ಹಲ್ಲೆ..!

ಈ ಸಂಬಂಧ 11 ಮಂದಿ ಜೂಜುಕೋರರ ಮೇಲೆ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details