ತುಮಕೂರು:ಅರಣ್ಯ ಒತ್ತುವರಿ ಮಾಡಿ ಉಳುಮೆ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ತಡೆಯಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೆ ಯತ್ನಿಸಿರುವ ಘಟನೆ ತುರುವೇಕೆರೆ ತಾಲೂಕಿನ ಮಲ್ಲದೇವನಹಳ್ಳಿಯಲ್ಲಿ ನಡೆದಿದೆ.
ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೆ ಯತ್ನ! - ತುಮಕೂರು ಸುದ್ದಿ
ಅರಣ್ಯ ಒತ್ತುವರಿ ಮಾಡುತ್ತಿದ್ದುದನ್ನ ಪ್ರಶ್ನಿಸಿದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
![ತುಮಕೂರು: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆಗೆ ಯತ್ನ! Attempt to murder](https://etvbharatimages.akamaized.net/etvbharat/prod-images/768-512-7114896-thumbnail-3x2-tmk.jpg)
ಮಲ್ಲದೇವನಹಳ್ಳಿ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಉಳುಮೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ನಿಸಾರ್ ಆಹಮದ್ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಉಳುಮೆ ಮಾಡುತ್ತಿದ್ದ ವ್ಯಕ್ತಿಯನ್ನು ತಡೆಯಲು ಮುಂದಾಗಿದ್ದಾರೆ. ಆದರೆ ಉಳುಮೆ ಮಾಡುತ್ತಿದ್ದ ವ್ಯಕ್ತಿ ಆರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಟ್ರ್ಯಾಕ್ಟರ್ ಹತ್ತಿಸಲು ಪ್ರಯತ್ನಿದ್ದಾನೆ ಎನ್ನಲಾಗಿದೆ. ಸಿಬ್ಬಂದಿಯ ದ್ವಿಚಕ್ರ ವಾಹನಗಳು ಟ್ರ್ಯಾಕ್ಟರ್ಗೆ ಸಿಕ್ಕಿ ಜಖಂಗೊಂಡಿವೆ. ಅರಣ್ಯ ಸಿಬ್ಬಂದಿ ಕೂದಲೆಳೆ ಆಂತರದಲ್ಲಿ ಪಾರಾಗಿದ್ದಾರೆ.
ಕೊಲೆಗೆ ಯತ್ನಿಸಿದ ಮಲ್ಲದೇವನಹಳ್ಳಿ ಶೇಖರ್ ಎಂಬುವನನ್ನು ಬಂಧಿಸುವಲ್ಲಿ ಅರಣ್ಯ ಇಲಾಖಾ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.