ತುಮಕೂರು: ತಿಪಟೂರು ತಾಲೂಕಿನ ಮಾದಿಹಳ್ಳಿ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಮಳೆ ಸುರಿದಿದೆ.
ತಿಪಟೂರು ಸುತ್ತಮುತ್ತ ಎಡೆ ಬಿಡದೆ ಸುರಿದ ಮುಂಗಾರು ಮಳೆ - ತುಮಕೂರಲ್ಲಿ ಮುಂಗಾರು ಮಳೆ
ಮಾದಿಹಳ್ಳಿ ಗ್ರಾಮದೊಳಗೆ ನುಗ್ಗಿದ ಮಳೆ ನೀರು ಅವಾಂತರ ಸೃಷ್ಟಿಸಿತ್ತು. ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿನ ಕೆರೆಗಳು ಬಹುತೇಕ ತುಂಬುವ ಹಂತಕ್ಕೆ ಬಂದಿವೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳತ್ತ ಮುಖ ಮಾಡುತ್ತಿದ್ದಾರೆ.
ಮಳೆ

ತಿಪಟೂರು, ತುರುವೇಕೆರೆ, ಗುಬ್ಬಿ, ಕುಣಿಗಲ್ ತಾಲೂಕಿನ ಸುತ್ತಮುತ್ತಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳಲ್ಲಿ ನೀರು ಹರಿಯುತ್ತಿದೆ. ಈ ಬಾರಿ ಉತ್ತಮ ಮುಂಗಾರು ಹಂಗಾಮಿನ ನಿರೀಕ್ಷೆಯಲ್ಲಿರುವ ರೈತಾಪಿ ವರ್ಗಕ್ಕೆ ನಿನ್ನೆ ಸುರಿದ ಮಳೆ ಸಂತಸ ತಂದಿದೆ.