ತುಮಕೂರು: ಮನೆ ನಿರ್ಮಾಣ ಮಾಡಲು ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲೈಸೆನ್ಸ್ ಕೊಡದೆ ಅಧಿಕಾರಿಗಳು ಸಾರ್ವಜನಿಕರಿಗೆ ಸಾಕಷ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ನೂತನ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.
ಲೈಸೆನ್ಸ್ ಕೊಡಲು ತುಮಕೂರು ನಗರ ಪ್ರಾಧಿಕಾರ ಹಿಂದೇಟು: ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ ಬೇಸರ - ಸಾರ್ವಜನಿಕರಿಗೆ ಕಿರುಕುಳ
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲೈಸೆನ್ಸ್ ಕೊಡದೆ ಅಧಿಕಾರಿಗಳು ಸಾರ್ವಜನಿಕರನ್ನ ಸತಾಯಿಸುತ್ತಿದ್ದು, ಈ ಸಮಸ್ಯೆಗೆ ಶೀಘ್ರ ಸರಿಪಡಿಸುವುದಾಗಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ ಭರವಸೆ ನೀಡಿದ್ದಾರೆ.
ಲೈಸೆನ್ಸ್ ನೀಡಲು ಒಂದು ವರ್ಷದವರೆಗೆ ಸಾರ್ವಜನಿಕರನ್ನು ಸತಾಯಿಸುತ್ತಿದ್ದಾರೆ. ಹೀಗಾಗಿ ಸಾರ್ವಜನಿಕರು ಈ ಪ್ರಾಧಿಕಾರದ ಅವಶ್ಯಕತೆ ಏಕೆ ಬೇಕು ಎಂದು ಪ್ರಶ್ನಿಸುವಂತಾಗಿದೆ ಎಂದಿದ್ದಾರೆ. ಮನೆ ನಿರ್ಮಾಣ ಮಾಡಲು ಅನುಮತಿ ಪಡೆಯಲು ಪೂರಕ ದಾಖಲೆಗಳನ್ನು ಸಲ್ಲಿಸಿದರೂ ಅಧಿಕಾರಿಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ.
ಆದಷ್ಟು ಬೇಗ ಮನೆ ನಿರ್ಮಾಣ ಮಾಡಲು ಪ್ರಾಧಿಕಾರದಿಂದ ಸಾರ್ವಜನಿಕರಿಗೆ ಅನುಮತಿ ನೀಡಬೇಕು ಫೀಸ್ ಅನ್ನು ಕೂಡ ಸಂದಾಯ ಮಾಡಲಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ ಈ ಒಂದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆಯನ್ನು ನೀಡುವುದಾಗಿ ತಿಳಿಸಿದ್ದಾರೆ.