ತುಮಕೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಮಳೆ ಪ್ರಮಾಣ ಕ್ಷೀಣಿಸಿರುವುದರಿಂದ ಕಾಡುಪ್ರಾಣಿಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ಕೊರತೆಯಾಗಿದೆ. ಹೀಗಾಗಿ ಅವು ಗ್ರಾಮಗಳತ್ತ ನುಗ್ಗುತ್ತಿರುವುದು ಸಾಮಾನ್ಯವಾಗಿದೆ. ಇನ್ನೊಂದೆಡೆ ಜಿಲ್ಲೆಯ ಶಿರಾ ತಾಲೂಕಲ್ಲಿ ರೈತರು ಕರಡಿಗಳ ಹಾವಳಿಯಿಂದ ನಷ್ಟ ಅನುಭವಿಸುತ್ತಿದ್ದಾರೆ.
ಬಯಲು ಸೀಮೆಯಲ್ಲಿ ಕಾಣಿಸಿಕೊಂಡ ಜಾಂಬವಂತ: ಕರಡಿ ನೋಡಿ ಜನರಿಗೆ ಆತಂಕ - ಶಿರಾ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೋಪಾಲದೇವರಹಳ್ಳಿಯಲ್ಲಿ ಕರಡಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕರಡಿಗಳು ಬೆಳೆಗಳನ್ನು ತಿಂದು ನಾಶ ಮಾಡುತ್ತಿವೆ ಎಂಬುದು ರೈತರ ಅಳಲಾಗಿದೆ. ಕರಡಿ ಉಪಟಳದಿಂದ ಬೇಸತ್ತಿರುವ ರೈತರು, ಅವುಗಳನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವಂತೆ ಮನವಿ ಮಾಡುತ್ತಿದ್ದಾರೆ.
ಬಯಲು ಸೀಮೆಗೆ ಎಂಟ್ರಿ ಕೊಟ್ಟ ಜಾಂಬವಂತ
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೋಪಾಲದೇವರಹಳ್ಳಿಯಲ್ಲಿ ಕರಡಿ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಅಲ್ಲದೆ, ಬೆಳೆಗಳನ್ನು ತಿಂದು ಹೊಲದಲ್ಲಿ ಓಡಾಡಿ ಬೆಳೆ ನಾಶ ಮಾಡುತ್ತಿವೆ ಎಂಬುದು ರೈತರ ಅಳಲಾಗಿದೆ.
ಕರಡಿ ಉಪಟಳದಿಂದ ಬೇಸತ್ತಿರುವ ರೈತರು, ಅವನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡುವಂತೆ ಮನವಿ ಮಾಡುತ್ತಿದ್ದಾರೆ.