ಕರ್ನಾಟಕ

karnataka

ETV Bharat / state

ತುಮಕೂರಿಗೆ ಆಗಮಿಸಲಿರುವ ರಾಹುಲ್ ಪಾದಯಾತ್ರೆಗೆ ಸಕಲ ಸಿದ್ಧತೆ: ಡಾ ಜಿ ಪರಮೇಶ್ವರ್ - ಈಟಿವಿ ಭಾರತ ಕನ್ನಡ

ರಾಹುಲ್​ ಗಾಂಧಿಯವರು ಕೈಗೊಂಡಿರುವ ಭಾರತ್​ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶಿಸಿ ಏಳು ದಿನಗಳು ಕಳೆದಿದ್ದು, ಅಕ್ಟೋಬರ್​ 8ರಂದು ತುಮಕೂರು ಜಿಲ್ಲೆಯನ್ನು ಪ್ರವೇಶಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್​ ತಿಳಿಸಿದ್ದಾರೆ.

bharat-jodo-yathra-enters-tumkur-on-8-october
ತುಮಕೂರು ಆಗಮಿಸಲಿರುವ ರಾಹುಲ್ ಗಾಂಧಿ ಪಾದಯಾತ್ರೆಗೆ ಸಕಲ ಸಿದ್ಧತೆ ನಡೆದಿದೆ : ಡಾ ಜಿ ಪರಮೇಶ್ವರ್

By

Published : Oct 6, 2022, 8:55 PM IST

ತುಮಕೂರು: ದೇಶದಲ್ಲಿರುವ ಅನೇಕ ಭಾಷೆ ಸಂಸ್ಕೃತಿಯನ್ನು ಒಗ್ಗೂಡಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆ ನಡೆಸುತ್ತಿದ್ದಾರೆ. ಈಗಾಗಲೇ ಕರ್ನಾಟಕಕ್ಕೆ ಪಾದಯಾತ್ರೆ ಬಂದು ಏಳು ದಿನಗಳು ಕಳೆದಿದೆ. ಅಕ್ಟೋಬರ್ 8ರಂದು ತುಮಕೂರು ಜಿಲ್ಲೆಯನ್ನು ಪ್ರವೇಶಿಸಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳಲ್ಲಿ ಪ್ರಮುಖವಾಗಿ ಎಲ್ಲ ಜಾತಿ ಧರ್ಮಗಳಿಗೆ ಪೂರಕವಾಗಿರುವ ವ್ಯವಸ್ಥೆಯ ಅಡಿಪಾಯ ಅಲುಗಾಡುತ್ತಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಹುಲ್ ಗಾಂಧಿ ಯಾತ್ರೆ ಆರಂಭಿಸಿದ್ದಾರೆ. ಈಗಾಗಲೇ ಸೋನಿಯಾ ಗಾಂಧಿ ಕೂಡ ಮಂಡ್ಯ ಜಿಲ್ಲೆಯ ಪಾಂಡವಪುರದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.

ತುಮಕೂರು ಆಗಮಿಸಲಿರುವ ರಾಹುಲ್ ಗಾಂಧಿ ಪಾದಯಾತ್ರೆಗೆ ಸಕಲ ಸಿದ್ಧತೆ ನಡೆದಿದೆ : ಡಾ ಜಿ ಪರಮೇಶ್ವರ್

ರಾಹುಲ್ ಗಾಂಧಿಯವರು ಪಾದಯಾತ್ರೆ ನೇತೃತ್ವ ವಹಿಸಿರುವುದರಿಂದ ಸಹಜವಾಗಿ ಲಕ್ಷಾಂತರ ಜನ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಇನ್ನು
ಈ ಪಾದಯಾತ್ರೆ ತುಮಕೂರು ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಸಂಚರಿಸಲಿದೆ. ಇದಕ್ಕಾಗಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಸಕಲಸಿದ್ಧತೆಯನ್ನು ನಡೆಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ :ಬೆಂಗಳೂರಿನಲ್ಲಿ ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಸಿ ಟಿ ರವಿ

ABOUT THE AUTHOR

...view details