ತುಮಕೂರು:ಬರೋಬ್ಬರಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರೊಳ್ಳ ಗ್ರಾಮದ ಹಿದಾಯತ್ ಬಂಧಿತ ಆರೋಪಿ.
19 ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿ ಬಂಧನ - ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪಿ ಬಂಧನ
ಬರೋಬ್ಬರಿ 19 ದ್ವಿಚಕ್ರ ವಾಹನಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಮಧುಗಿರಿ ಪೊಲೀಸರು ಬಂಧಿಸಿ ಆತನಿಂದ 9 ಲಕ್ಷರೂ ಮೌಲ್ಯದ 19 ಬೈಕ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಧುಗಿರಿ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪೊಲೀಸ್ ಸಿಬ್ಬಂದಿ ಚಂದ್ರಮೋಹನ್ ಎಂಬುವರು ಗಸ್ತು ತಿರುಗುತ್ತಿದ್ದಾಗ ಮಧುಗಿರಿ ಪಟ್ಟಣದ ಪಾವಗಡ ವೃತ್ತದಲ್ಲಿ ಅನುಮಾನಾಸ್ಪದವಾಗಿ ಹೋಗುತ್ತಿದ್ದ ಹಿದಾಯತ್ನನ್ನ ತಡೆದು ನಿಲ್ಲಿಸಿ ಆತ ತೆಗೆದುಕೊಂಡು ಹೋಗುತ್ತಿದ್ದ ದಾಖಲಾತಿಗಳನ್ನು ಪರಿಶೀಲಿಸಿದಾಗ, ಆತ ಮಾಡಿದ್ದ ಖತರ್ನಾಕ್ ಕೆಲಸದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾನೆ.
ತಕ್ಷಣ ಆತನನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆತಂದು ಸುದೀರ್ಘ ವಿಚಾರಣೆ ನಡೆಸಿದಾಗ ಆತ ಸುಮಾರು 9 ಲಕ್ಷ ರೂ. ಮೌಲ್ಯದ 19 ಬೈಕ್ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತನ ಬಳಿಯಿಂದ 19 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ ಕದ್ದಿರುವ ಎಲ್ಲಾ ವಾಹನಗಳು ಬಹುತೇಕ ಮಧ್ಯಮ ವರ್ಗದವರಿಗೆ ಸೇರಿದ ದ್ವಿಚಕ್ರ ವಾಹನಗಳಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ತಿಳಿಸಿದ್ದಾರೆ.