ತುಮಕೂರು:ಕೊರಟಗೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಅವರಿಂದು ನಾಮಪತ್ರ ಸಲ್ಲಿಸಿದರು. ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿ, ಕೊರಟಗೆರೆ ಸರ್ಕಾರಿ ಬಸ್ ನಿಲ್ದಾಣ ವೃತ್ತದಿಂದ ತಾಲೂಕು ಕಚೇರಿಗೆ ಬಂದು ಕ್ಷೇತ್ರದ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಜೆಡಿಎಸ್‌ನಿಂದ ಮಾಜಿ ಶಾಸಕ ಸುಧಾಕರ್ ಲಾಲ್ ಚುನಾವಣಾ ಕಣದಲ್ಲಿದ್ದಾರೆ. ಕಳೆದ ನಾಲ್ಕೈದು ತಿಂಗಳಿನಿಂದ ಅನಿಲ್ ಕುಮಾರ್ ಕ್ಷೇತ್ರದಾದ್ಯಂತ ಸಂಘಟನೆಯಲ್ಲಿ ತೊಡಗಿದ್ದಾರೆ.