ತುಮಕೂರು:ಲೋಕಸಭಾ ಕ್ಷೇತ್ರದ ಮತದಾನದ ದಿನ ನಿಷ್ಪಕ್ಷಪಾತ, ಶಾಂತಿಯುತ ವಾತಾವರಣ ನಿರ್ಮಾಣಕ್ಕಾಗಿ ಪೂರಕ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ಮತ ಎಣಿಕೆ ಕಾರ್ಯಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆಗೆ ಬಿಜೆಪಿ ಅಭ್ಯರ್ಥಿ ಮನವಿ - undefined
ತುಮಕೂರು ಹೈ ವೋಲ್ಟೇಜ್ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಲ್ಪಟ್ಟಿರುವ ಇದು ಅತಿ ಸೂಕ್ಷ್ಮ ಕ್ಷೇತ್ರವಾಗಿದ್ದು, ಮತ ಎಣಿಕೆ ದಿನ ನಿಷ್ಪಕ್ಷಪಾತ, ಶಾಂತಿಯುತ ವಾತಾವರಣ ನಿರ್ಮಾಣಕ್ಕಾಗಿ ಪೂರಕ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಪತ್ರ ಬರೆದಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಿ .ಎಸ್ .ಬಸವರಾಜ್
ಹೈ ವೋಲ್ಟೇಜ್ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಲ್ಪಟ್ಟಿರುವ ಇದು ಅತಿ ಸೂಕ್ಷ್ಮ ಕ್ಷೇತ್ರವಾಗಿದೆ. ಮತ ಎಣಿಕೆ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರದ ಮೈಕ್ರೋ ಅಬ್ಸರ್ವರ್ಗಳ ಮೂಲಕ ನಡೆಸಬೇಕು. ಪಕ್ಷದ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಗೊಂದಲ ನಿರ್ಮಾಣ ಮಾಡುವ ಸಾಧ್ಯತೆಗಳಿವೆ.
ಹಾಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹೆಚ್ಚುವರಿ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಮುಕ್ತ ಹಾಗೂ ನಿಷ್ಪಕ್ಷಪಾತ ಮತ ಎಣಿಕೆ ಪ್ರಕ್ರಿಯೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.