ಕರ್ನಾಟಕ

karnataka

ETV Bharat / state

ಶಿರಾ ಉಪಕದನ: ಬಿಜೆಪಿ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಉಮೇದುವಾರಿಕೆ ಸಲ್ಲಿಕೆ - Sira BJP candidate Dr.Rajesh Gowda

ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಶಿರಾ ನಗರಾಧ್ಯಕ್ಷ ವಿಜಯರಾಜ್ ಹಾಜರಿದ್ದರು.

BJP candidate Dr.Rajesh Gowda nomination
ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಉಮೇದುವಾರಿಕೆ ಸಲ್ಲಿಕೆ

By

Published : Oct 14, 2020, 12:42 PM IST

Updated : Oct 14, 2020, 1:35 PM IST

ತುಮಕೂರು:ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರಾಜೇಶ್ ಗೌಡ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆ ಬಂದ ರಾಜೇಶ್ ಗೌಡ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ವೇಳೆ ಅಭ್ಯರ್ಥಿ ಸೇರಿದಂತೆ ಮೂವರಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗಿತ್ತು. ಹೀಗಾಗಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಜೊತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ಶಿರಾ ನಗರಾಧ್ಯಕ್ಷ ವಿಜಯರಾಜ್ ಹಾಜರಿದ್ದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಓಬಳೇಶಪ್ಪ ಉಮೇದುವಾರಿಕೆ ಸಲ್ಲಿಕೆ...

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಓಬಳೇಶಪ್ಪ ತಮ್ಮ ನಾಮಪತ್ರ ಸಲ್ಲಿಸಿದರು. ಪಕ್ಷದ ಮುಖಂಡ ಮಲ್ಲಿಕಾರ್ಜುನ ಭಟ್ಟರಹಳ್ಳಿ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು. ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಉಮೇದುವಾರಿಕೆ ಸಲ್ಲಿಕೆ
Last Updated : Oct 14, 2020, 1:35 PM IST

ABOUT THE AUTHOR

...view details