ತುಮಕೂರು: ಕೋವಿಡ್-19 ಸಮಯದಲ್ಲಿ ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ಮಾಜಿ ಸಚಿವ ಟಿ.ಬಿ. ಜಯಚಂದ್ರ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ: ಮಾಜಿ ಸಚಿವ ಟಿ.ಬಿ. ಜಯಚಂದ್ರ - BJP government is doing democratic carnage
ಜುಲೈ. 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು, ಬಿಜೆಪಿ ಸರ್ಕಾರ ಜನ ವಿರೋಧಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ ಎಂದು ತುಮಕೂರಿನಲ್ಲಿ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜುಲೈ. 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ರೈತ ವಿರೋಧಿ ಶಾಸನಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ರೈತರಿಗೆ ಇದು ಕರಾಳ ಶಾಸನವಾಗಲಿದೆ. ಸುಗ್ರೀವಾಜ್ಞೆ ಮೂಲಕ ಕಾಯ್ದೆಯನ್ನು ಜಾರಿಗೊಳಿಸಿ ಜನತೆಯನ್ನು ಕತ್ತಲಲ್ಲಿ ಇಡುವ ಕೆಲಸ ಮಾಡುತ್ತಿದೆ ಎಂದರು.
ಜುಲೈ. 2ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಜನತೆಗೆ ತಿಳಿಸುವ ಕಾರ್ಯ ಮಾಡಲಾಗುವುದು ಎಂದರು.