ತುಮಕೂರು :ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಿಪಟೂರಿನ ಮಾರನಗೆರೆಯ ಕೆರೆಯಲ್ಲಿ ನಡೆದಿದೆ.
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವು - boys dead by drowning in lake
ಕೆರೆಯಲ್ಲಿ ಅಲ್ಲಲ್ಲಿ ಗುಂಡಿಗಳು ಇದ್ದ ಪರಿಣಾಮ ಈಜಲು ಆಗದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಕೆರೆಗೆ ಈಜಲು ಹೋಗಿದ್ದ ಬಾಲಕರು ನೀರಿನಲ್ಲಿ ಮುಳುಗಿ ಸಾವು
ಕೆರೆಗೆ ಈಜಲು ಹೋಗಿದ್ದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವು
ದೀಪಕ್ ಗೌಡ(14), ಕೌಶಿಕ್ (12), ತರುಣ್ (11) ಮೃತ ಬಾಲಕರಾಗಿದ್ದಾರೆ. ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರ ಪೈಕಿ ಮೂವರು ಕೆರೆಯಲ್ಲಿ ಈಜುತ್ತಿದ್ದರು. ಒಂದು ಹಂತದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವೇಳೆ ದಡದಲ್ಲಿದ್ದ ಮತ್ತೊಬ್ಬ ಸಮೀಪ ತೆರಳಿ ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಕೆರೆಯಲ್ಲಿ ಅಲ್ಲಲ್ಲಿ ಗುಂಡಿಗಳು ಇದ್ದ ಪರಿಣಾಮ ಈಜಲು ಆಗದೆ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Apr 2, 2021, 5:16 PM IST