ತುಮಕೂರು: ಜಿಲ್ಲೆಯ ಕೊರಟಗೆರೆ ತಾಲೂಕಿನ ತೀತಾ ಜಲಾಶಯದ ಸಮೀಪ ಇರುವ ಸೇತುವೆ ಕುಸಿದು ಬಿದ್ದಿದೆ. ನಿರಂತರವಾಗಿ ಸುರಿದ ಮಳೆಯಿಂದ ಸೇತುವೆ ಶಿಥಿಲಗೊಂಡಿತ್ತು. ನಿನ್ನೆ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆ ಸುರಿದ ಕಾರಣ ಕುಸಿದು ಬಿದ್ದಿದೆ. ಇದರಿಂದ ಕೊರಟಗೆರೆ ತಾಲೂಕಿನ ಗೊರವನಹಳ್ಳಿ, ತೀತಾ ಮಧ್ಯದ ರಸ್ತೆ ಸಂಚಾರ ಕಡಿತಗೊಂಡಿದೆ.
ನಿರಂತರ ಮಳೆ.. ತೀತಾ ಜಲಾಶಯದ ಸಮೀಪ ಕುಸಿದು ಬಿದ್ದ ಸೇತುವೆ - ಕುಸಿದು ಬಿದ್ದ ಸೇತುವೆ
ನಿರಂತರವಾಗಿ ಸುರಿದ ಮಳೆಯಿಂದ ಕೊರಟಗೆರೆ ತಾಲೂಕಿನ ತೀತಾ ಜಲಾಶಯದ ಸಮೀಪ ಇರುವ ಸೇತುವೆ ಕುಸಿದು ಬಿದ್ದಿದೆ.
ಸೇತುವೆ ನಿರ್ಮಾಣ ಮಾಡಿ 8 ವರ್ಷಗಳಾಗಿವೆ. ಕಳಪೆ ಕಾಮಗಾರಿಯಿಂದ ಸೇತುವೆ ಕುಸಿದು ಬಿದ್ದಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಸೇತುವೆ ಕುಸಿದರೂ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎನ್ನಲಾಗಿದೆ. ಸೇತುವೆ ಕುಸಿತಗೊಂಡಿದ್ದರಿಂದ ರಸ್ತೆ ಸಂಚಾರ ಸಂಪೂರ್ಣ ಕಡಿತವಾಗಿದೆ. ಬಹುತೇಕ ಶಾಲಾ ಕಾಲೇಜು ಮಕ್ಕಳು, ನಿತ್ಯ ಕೆಲಸಕ್ಕೆ ಹೋಗುವವರು ಸಂಚಾರಕ್ಕೆ ಅನ್ಯಮಾರ್ಗವಿಲ್ಲದೇ ಸಂಕಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ:ಮುಂದುವರೆಯಲಿರುವ ವರ್ಷಧಾರೆ: ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ