ಕರ್ನಾಟಕ

karnataka

ETV Bharat / state

ತುಮಕೂರು: ಕಟ್ಟಡ ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ತುಮಕೂರು ಜಿಲ್ಲಾ ಕಾರ್ಮಿಕರ ಕಚೇರಿ ಎದುರು ಕಟ್ಟಡ ನಿರ್ಮಾಣ ಕಾರ್ಮಿಕರು ಪ್ರತಿಭಟನೆ ನಡೆಸಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

By

Published : Jul 30, 2020, 4:29 PM IST

Protest
Protest

ತುಮಕೂರು:ಸಂಕಷ್ಟದಲ್ಲಿರುವ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಮಗ್ರ ಪರಿಹಾರಕ್ಕೆ ಆಗ್ರಹಿಸಿ‌ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, ಕಲ್ಯಾಣ ಮಂಡಳಿ ಪರಿಹಾರದ ಲೆಕ್ಕ ನೀಡಲು ಒತ್ತಾಯಿಸಿ ಹಾಗೂ ಕಲ್ಯಾಣ ಮಂಡಳಿಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕರಿಗೆ ಘೋಷಿಸಿರುವ 5,000 ರೂ. ಪರಿಹಾರ ವಿತರಣೆ ಅವಧಿಯನ್ನು ವಿಸ್ತರಿಸಬೇಕು. ಇದುವರೆಗೂ ಪರಿಹಾರಧನ ಸಿಗದವರಿಗೆ ಶೀಘ್ರವೇ ಅವರ ಖಾತೆಗಳಿಗೆ ಜಮಾ ಮಾಡಬೇಕು. ಕೆಲಸವಿಲ್ಲದೆ ಕಂಗಾಲಾಗಿರುವ ಎಲ್ಲಾ ಕಟ್ಟಡ ಕಾರ್ಮಿಕರಿಗೆ ವಾರಕ್ಕೆ 2,000 ರೂ.ನಂತೆ ಕನಿಷ್ಠ ಮೂರು ತಿಂಗಳವರೆಗೆ ಕೊರೊನಾ ಪರಿಹಾರ ಘೋಷಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಮದುವೆ ಸಹಾಯಧನ, ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಬೇಕು ಮತ್ತು ವಿವಿಧ ಸಹಾಯಧನಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕೆಂದು ಆಗ್ರಹಿಸಿದರು.

ಸೇವಾಸಿಂಧು ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ನೋಂದಣಿ ಮತ್ತು ನವೀಕರಣವನ್ನು ಕೇಂದ್ರ ಕಾರ್ಮಿಕ ಸಂಘಟನೆಗಳ ಮೂಲಕವೇ ಆಗುವಂತೆ ನಿಯಮಗಳಲ್ಲಿ ಬದಲಾವಣೆ ತರಬೇಕು. ಖಾಲಿ ಇರುವ ಕಾರ್ಮಿಕ ವೃತ್ತ ನಿರೀಕ್ಷಕರು ಮತ್ತು ಇತರೆ ಹುದ್ದೆಗಳ ಶೀಘ್ರ ನೇಮಕಾತಿ ಆಗಬೇಕು. ಬೆಂಗಳೂರಿನಲ್ಲಿ ನೀಡಿದಂತೆ ರಾಜ್ಯದ ಎಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರೇಷನ್ ವಿತರಣೆ ಮಾಡಬೇಕೆಂದು ಒತ್ತಾಯಿಸಿ ಕಾರ್ಮಿಕ ಇಲಾಖೆಯ ಇನ್ಸ್‌ಪೆಕ್ಟರ್ ಜಯಪ್ರಕಾಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ABOUT THE AUTHOR

...view details