ಕರ್ನಾಟಕ

karnataka

ETV Bharat / state

ಖಾಸಗಿ ಬಸ್ ಉರುಳಿ ಬಿದ್ದು ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ! - ತುಮಕೂರು

ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್​ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೆಕ್ಕೇರಹಳ್ಳಿ ಗ್ರಾಮದ ಬಳಿ ಜರುಗಿದೆ.

Tumkur
ಖಾಸಗಿ ಬಸ್ ಉರುಳಿ ಬಿದ್ದು ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

By

Published : Feb 18, 2021, 10:44 PM IST

ತುಮಕೂರು:ಮದುವೆ ಕಾರ್ಯಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೆಕ್ಕೇರಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.

ಖಾಸಗಿ ಬಸ್ ಉರುಳಿ ಬಿದ್ದು ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ!

ವಿನಾಯಕ ಹೆಸರಿನ ಖಾಸಗಿ ಬಸ್​ನಲ್ಲಿ ತೋವಿನಕೆರೆ ಸಮೀಪದ ಶಂಬೆನಹಳ್ಳಿ ಗೊಳ್ಳರಹಟ್ಟಿ ಗ್ರಾಮದಿಂದ ಶಿರಾ ತಾಲೂಕಿನ ಬುಕ್ಕಾಪಟ್ಟಣ ಗ್ರಾಮಕ್ಕೆ ಮದುವೆ ಕಾರ್ಯಕ್ರಮಕ್ಕೆ ಹೊರಟಿದ್ದರು. ಈ ವೇಳೆ ಶಿರಾ ತಾಲೂಕಿನ ಮೇಕೆರಹಳ್ಳಿ ಬಳಿ ಬಸ್ ಆಯತಪ್ಪಿ ಉರುಳಿ ಬಿದ್ದಿದೆ ಎನ್ನಲಾಗ್ತಿದೆ.

ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

ಶಿರಾ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details