ತುಮಕೂರು:ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿರಾ ವಿಧಾನಸಭಾ ಕ್ಷೇತ್ರ ಮತದಾನ ಅಂತ್ಯ: ಬಿಜೆಪಿ ಅಭ್ಯರ್ಥಿಯ ಭವಿಷ್ಯ ನುಡಿದ ಬಿ.ವೈ.ವಿಜಯೇಂದ್ರ - Sira by-election latest news
ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನವಾಗಿದೆ. ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕುರಿತು ಭವಿಷ್ಯ ನುಡಿದಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ತಮ್ಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡ ಅವರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಶೇ. 85ರಷ್ಟು ಮತದಾನವಾಗಿದ್ದು, ಈ ಮೂಲಕ ಮತದಾರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತದೆ ಎಂದರು.
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮುನ್ನವೇ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ವಿಜಯಶಾಲಿಗಳೆಂದು ಘೋಷಣೆ ಮಾಡಿಕೊಂಡಿದ್ದವು. ಮೂರು ವಾರಗಳಿಂದ ಕ್ಷೇತ್ರದಲ್ಲಿ ಇದ್ದಂತಹ ನಾವುಗಳು ಇಂದು ಸಂತೃಪ್ತಿ ಹಾಗೂ ಸಂತೋಷದಿಂದ ಬೆಂಗಳೂರಿಗೆ ಹೋಗುತ್ತಿದ್ದೇವೆ ಎಂದು ಹೇಳುವ ಮೂಲಕ ಕ್ಷೇತ್ರದಲ್ಲಿ ತಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.