ತುಮಕೂರು:ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಭೈರತಿ ಬಸವರಾಜ್, ಮೊದಲು ಚುನಾವಣೆಯಲ್ಲಿ 113 ಸ್ಥಾನದಲ್ಲಿ ಗೆಲ್ಲಲಿ. ಆ ನಂತರ ಮುಖ್ಯಮಂತ್ರಿ ಸ್ಥಾನದ ಬಗ್ಗೆ ತೀರ್ಮಾನಿಸಲಿ ಎಂದು ಟೀಕಿಸಿದ್ದಾರೆ.
ನಗರದಲ್ಲಿನ ಸ್ಮಾರ್ಟ್ ಸಿಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಮಾಡಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರವೇ ಇಲ್ಲ ಎಂದು ಸ್ವಷ್ಟಪಡಿಸಿದರು.