ತುಮಕೂರು:ಹಣಕಾಸಿನ ಸಮಸ್ಯೆಯಿಂದ ರೋಸಿ ಹೋಗಿದ್ದ ಕ್ಯಾಬ್ ಚಾಲಕನೊಬ್ಬ ನೇಣಿಗೆ ಶರಣಾಗಿದ್ದಾನೆ.
ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಯಾಬ್ ಚಾಲಕ - ಹಣಕಾಸಿನ ಸಮಸ್ಯೆ
ತೀವ್ರ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಕ್ಯಾಬ್ ಚಾಲಕನೊಬ್ಬ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
![ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಯಾಬ್ ಚಾಲಕ cab driver suicide](https://etvbharatimages.akamaized.net/etvbharat/prod-images/768-512-7109925-thumbnail-3x2-byke.jpg)
ಕ್ಯಾಬ್ ಚಾಲಕ ಆತ್ಮಹತ್ಯೆ
ಕ್ಯಾಬ್ ಚಾಲಕ ಆತ್ಮಹತ್ಯೆ
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಸಮೀಪ ಈ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಕೋಡ್ಲಹಳ್ಳಿ ಗ್ರಾಮದ ಮಧು (25) ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿ ಸಂಬಂಧಿಕರೊಬ್ಬರಿಗೆ ವಾಟ್ಸ್ಆ್ಯಪ್ ಮಾಡಿದ್ದಾನೆ.
ಬೆಂಗಳೂರು ನಗರದಲ್ಲಿ ಕಾರು ಚಾಲಕನಾಗಿದ್ದ ಮಧು ಕೊರೊನಾ ಲಾಕ್ಡೌನ್ ಹಿನ್ನೆಲೆ ಸ್ವಗ್ರಾಮಕ್ಕೆ ವಾಪಸ್ ಆಗಿದ್ದ. ಮೃತ ದೇಹವನ್ನು ಕೊರಟಗೆರೆ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.