ಕರ್ನಾಟಕ

karnataka

ETV Bharat / state

ಅಭ್ಯರ್ಥಿಯ ವೈಯಕ್ತಿಕ ವಿಚಾರ ಪ್ರಶ್ನಿಸಬಾರದು : ಡಾ. ಬಿ. ಪುಷ್ಪ ಅಮರನಾಥ್ - ಸಂಸದೆ ಶೋಭಾ ಕರಂದ್ಲಾಜೆ

ರಾಜ್ಯದಲ್ಲಿ ಉಪಚುನಾವಣೆ ಎದುರಾಗಿದ್ದು, ಆರ್.ಆರ್. ನಗರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಪುಷ್ಪ ಅಮರನಾಥ್ ತಿಳಿಸಿದರು.

Dr. Pushpa
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ. ಪುಷ್ಪ ಅಮರನಾಥ್

By

Published : Oct 17, 2020, 6:21 PM IST

ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವಿಲಿಗೆ ಕಾಳುಗಳನ್ನು ಹಾಕಲು, ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರೋಗ್ಯವನ್ನು ವಿಚಾರಿಸಲು ಸಮಯವಿರುತ್ತದೆ, ಆದರೆ ದೇಶದಲ್ಲಿನ ಮಹಿಳೆಯರ ರಕ್ಷಣೆಯ ಬಗ್ಗೆ ಮಾತನಾಡಲು, ಮಹಿಳೆಯರ ರಕ್ಷಣೆಯ ಬಗ್ಗೆ ಟ್ವೀಟ್ ಮಾಡಲು ಸಮಯವಿಲ್ಲ. ಮಹಿಳೆಯರ ರಕ್ಷಣೆಯ ಬಗ್ಗೆ ಕಾನೂನನ್ನು ಬಿಗಿಗೊಳಿಸಲು ಯೋಗ್ಯತೆ ಇಲ್ಲ ಎಂದು ಪ್ರಧಾನಮಂತ್ರಿ ಅವರ ವಿರುದ್ಧ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಬಿ. ಪುಷ್ಪ ಅಮರನಾಥ್ ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರವನ್ನು ಗಮನಿಸುತ್ತಾ ಹೋದರೆ ದೇಶದಲ್ಲಿರುವ ಅರ್ಧಭಾಗದಷ್ಟು ಮಹಿಳೆಯರಿಗೆ ಇನ್ನು ಸಂಪೂರ್ಣವಾಗಿ ಸ್ವಾತಂತ್ರ್ಯ ದೊರೆತಿದೆಯೋ ಇಲ್ಲವೋ ಎಂಬ ಪ್ರಶ್ನೆಯನ್ನು ಹಾಕಿಕೊಳ್ಳಬೇಕಿದೆ ಎಂದರು.

ದೇಶದಲ್ಲಿ ಪ್ರತಿದಿನವೂ ಒಂದಲ್ಲ ಒಂದು ಭಾಗದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತದೆ. ಅವರಿಗೆ ನ್ಯಾಯ ದೊರಕಿಸುವಲ್ಲಿ ನಾವು ಸೋಲುತ್ತಿದ್ದೇವೆ. ಆದರೆ ಹತ್ರಾಸ್​ನಲ್ಲಿ ಅತ್ಯಾಚಾರಕ್ಕೆ ಒಳಗಾದ ಮಹಿಳೆ, ನನ್ನ ಮೇಲೆ ಅತ್ಯಾಚಾರವಾಗಿದೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾಳೆ. ನೋವನ್ನು ತಾಳಲಾರದೆ ಕೊನೆಗೆ ಮಹಿಳೆ ಸಾವಿಗಿಡಾಗುತ್ತಾಳೆ. ಈ ಸಮಯದಲ್ಲಿ ಪೋಷಕರಿಗೂ ಆ ಮಹಿಳೆಯ ಮುಖವನ್ನು ತೋರಿಸದೆ, ಅಲ್ಲಿನ ಪೊಲೀಸರು ಅಂತ್ಯಸಂಸ್ಕಾರ ಮಾಡುತ್ತಾರೆ‌. ಬಿಜೆಪಿ ನಾಯಕರ ಕುತಂತ್ರ ಇಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಬಿಜೆಪಿ ಮುಖಂಡರ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಸ್ಥಾನಗಳನ್ನು ಹೊಂದಿರುವ ಸ್ಥಳೀಯ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗಿನ ಬಿಜೆಪಿ ಮುಖಂಡರನ್ನು ನೀವು ಆ ಸ್ಥಾನದಲ್ಲಿ ಮುಂದುವರೆಯುವ ಯೋಗ್ಯತೆ ಇದೆಯೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಉಪಚುನಾವಣೆ ಎದುರಾಗಿದ್ದು, ಆರ್.ಆರ್ ನಗರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಗಂಡನ ಹೆಸರನ್ನು ಹೇಳಿಕೊಂಡು ಚುನಾವಣೆಗೆ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಇದು ಕುಸುಮಾ ಅವರ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಶೋಭಾ ಕರಂದ್ಲಾಜೆ ಅವರನ್ನು ಪ್ರಶ್ನಿಸಿದರು.

ನಂತರ ಹತ್ರಾಸ್​ನಲ್ಲಿ ನಡೆದ ಅತ್ಯಾಚಾರವನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.

ABOUT THE AUTHOR

...view details