ತುಮಕೂರು:ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಿಇಟಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಕುಂದೂರು ಪಾಳ್ಯದ ಬಳಿ ನಡೆದಿದೆ.
ಕಿರಣ್ (18) ಹಾಗೂ ತ್ರಿನೇಶ್ (20) ಮೃತಪಟ್ಟ ವಿದ್ಯಾರ್ಥಿಗಳು ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳು ತುರುವೇಕೆರೆ ತಾಲೂಕು ದಂಡಿನಶಿವರ ಗ್ರಾಮದವರಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಐದು ವಿದ್ಯಾರ್ಥಿಗಳು ಕಾರಿನಲ್ಲಿ ತೆರಳುತ್ತಿದ್ದರು.