ಕರ್ನಾಟಕ

karnataka

ETV Bharat / state

ಈ ಟಿವಿ ಭಾರತ ಫಲಶೃತಿ: ಎಂಆರ್​ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದ 6 ಮೆಡಿಕಲ್ ಸ್ಟೋರ್ ವಿರುದ್ಧ ಮೊಕದ್ದಮೆ ದಾಖಲು - ಮೆಡಿಕಲ್ ಸ್ಟೋರ್ ವಿರುದ್ಧ ಮೊಕದ್ದಮೆ ದಾಖಲು

ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್​ಗಳನ್ನು ಎಂಆರ್​ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ 6 ಮೆಡಿಕಲ್ ಸ್ಟೋರ್​ಗಳ ವಿರುದ್ಧ ಮೊಕದ್ದಮೆ ದಾಖಲಿಸಿದೆ.

case-filed-against-medicals-for-selling-equipment-for-more-than-mrp
case-filed-against-medicals-for-selling-equipment-for-more-than-mrp

By

Published : May 21, 2021, 9:23 PM IST

ತುಮಕೂರು: ಕಾನೂನು ಮಾಪನಶಾಸ್ತ್ರ ಇಲಾಖೆಯು ಕೋವಿಡ್ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಆಕ್ಸಿಮೀಟರ್​ಗಳನ್ನು ಎಂಆರ್​ಪಿಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ 6 ಮೆಡಿಕಲ್ ಸ್ಟೋರ್​ಗಳ ವಿರುದ್ಧ ಮೊಕದ್ದಮೆ ದಾಖಲಿಸಿದೆ.

ಪಲ್ಸ್ ಆಕ್ಸಿಮೀಟರ್, ಥರ್ಮಾಮೀಟರ್ ದರ ದಿಢೀರ್ ಏರಿಕೆ ಕುರಿತು ಈಟಿವಿ ಭಾರತದಲ್ಲಿ ವಿಶೇಷ ಸುದ್ದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿರುವ ಜಿಲ್ಲಾಡಳಿತ, ಜಿಲ್ಲೆಯಲ್ಲಿ ತಪಾಸಣೆ ನಡೆಸಿ ಈ ಮೊಕದ್ದಮೆ ದಾಖಲಿಸಿದೆ.

ಇದನ್ನೂ ಓದಿ:ಪಲ್ಸ್ ಆಕ್ಸಿಮೀಟರ್, ಥರ್ಮಾಮೀಟರ್‌ ದರ ದಿಢೀರ್ ಏರಿಕೆ

ಸಹಾಯಕ ನಿಯಂತ್ರಕರ ನೇತೃತ್ವದಲ್ಲಿ ತುಮಕೂರು ಉಪವಿಭಾಗ-1 ಹಾಗೂ 2, ತಿಪಟೂರು ಉಪವಿಭಾಗ ಮತ್ತು ಮಧುಗಿರಿ ಉಪವಿಭಾಗದ ನಾಲ್ಕು ನಿರೀಕ್ಷಕರ ತಂಡ ತಪಾಸಣೆ ನಡೆಸಿದ್ದು, ಎಂಆರ್​ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 6 ಔಷಧ ಮಳಿಗೆ ಸೇರಿದಂತೆ ಪೊಟ್ಟಣ ಸಾಮಗ್ರಿ ರೂಪದ ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ 4 ದಿನಸಿ ಅಂಗಡಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.

ಒಟ್ಟಾರೆ 26 ಔಷಧ ಮಳಿಗೆ, 64 ದಿನಸಿ ಅಂಗಡಿ ಹಾಗೂ 14 ನ್ಯಾಯ ಬೆಲೆ ಅಂಗಡಿಗಳನ್ನು ತಪಾಸಣೆ ಮಾಡಲಾಗಿದೆ. ತಪಾಸಣೆ ಸಂದರ್ಭದಲ್ಲಿ ಮೆಡಿಕಲ್ ಸ್ಟೋರ್​ಗಳಿಂದ 7,500 ರೂ. ಹಾಗೂ ದಿನಸಿ ಅಂಗಡಿಗಳಿಂದ 4,500 ರೂ.ಗಳನ್ನು ವಸೂಲಿ ಮಾಡಲಾಗಿದೆ.

ABOUT THE AUTHOR

...view details