ತುಮಕೂರು: ಏ.08 ರಂದು ತುರುವೇಕೆರೆ ತಾಲೂಕಿನ ಸಿ ಎಸ್ ಪುರ ಗ್ರಾಮದಲ್ಲಿ ಶಾಸಕ ಮಸಾಲೆ ಜಯರಾಮ್ ಮತ್ತು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಆರೋಪ-ಪ್ರತ್ಯಾರೋಪದೊಂದಿಗೆ ನಡೆಸಿದ್ದ ಪ್ರತಿಭಟನಾ ಱಲಿಯಲ್ಲಿ ಕೋವಿಡ್ ನಿಯಮಗಳು ಉಲ್ಲಂಘನೆ ಮಾಡಿದ್ದಾರೆ ಎಂದು ಎರಡೂ ಕಡೆಯವರ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಯಾರೇ ಉಲ್ಲಂಘನೆ ಮಾಡಿದರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಘಟನೆ ಸಂಬಂಧ ಈಗಾಗಲೇ ಪೊಲೀಸರಿಗೆ ಎರಡು ಕಡೆಯವರ ವಿರುದ್ಧ ಪ್ರಕರಣ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.