ತುಮಕೂರು: ಹೊಸ ವರ್ಷಾಚರಣೆ ಕಾರ್ಯಕ್ರಮವನ್ನು ಬಹಿರಂಗವಾಗಿ ಆಚರಿಸದೆ ಸರಳವಾಗಿ ಆಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ ಜನತೆಗೆ ಕರೆ ನೀಡಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ನೂತನ ವರ್ಷಾಚರಣೆ ನಿಷಿದ್ಧ: ತುಮಕೂರು ಎಸ್ಪಿ - ತುಮಕೂರು ಹೊಸ ವರ್ಷ ಆಚರಣೆ
ತುಮಕೂರು ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ಮಾಡದಂತೆ ನಿಷೇಧ ಹೇರಲಾಗಿದ್ದು, ಸರ್ಕಾರದ ಆದೇಶದಂತೆ ಮನಯಲ್ಲೇ ಸರಳವಾಗಿ ಹೊಸ ವರ್ಷಾಚರಣೆ ಮಾಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ
ಈ ಕುರಿತು ಹೇಳಿಕೆ ನೀಡಿರುವ ಅವರು, ತುಮಕೂರು ಜಿಲ್ಲಾದ್ಯಂತ ರಸ್ತೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ಮಾಡದಂತೆ ನಿಷೇಧ ಹೇರಲಾಗಿದೆ. ಅಲ್ಲದೆ ನಿರಂತರವಾಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಗಸ್ತು ತಿರುಗುತ್ತಿರುತ್ತಾರೆ. ಸರ್ಕಾರದ ಆದೇಶದಂತೆ ಇಂತಹ ಆಚರಣೆಗಳಲ್ಲಿ ಪಾಲ್ಗೊಳ್ಳದೆ ಮನೆಗಳಲ್ಲಿ ಸರಳವಾಗಿ ವರ್ಷಾಚರಣೆ ಆಚರಿಸಿ ಎಂದು ತಿಳಿಸಿದ್ದಾರೆ.