ತುಮಕೂರು:ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ಬೈಕ್ ಱಲಿ ನಡೆಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರೈತ ಸಂಘದ ಪ್ರತಿನಿಧಿಗಳು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಬೈಕ್ ಱಲಿ ನಡೆಸಲು ಮುಂದಾದ ಕಾರ್ಯಕರ್ತರ ತಡೆದ ತುಮಕೂರು ಪೊಲೀಸರು - ತುಮಕೂರು ಬೈಕ್ ರ್ಯಾಲಿ ಸುದ್ದಿ
ತುಮಕೂರಿನಲ್ಲಿ ಕರ್ನಾಟಕ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಬೈಕ್ ಱಲಿ ನಡೆಸಲು ಕಾರ್ಯಕರ್ತರು ಮುಂದಾಗಿದ್ದು, ಅವರನ್ನು ಪೊಲೀಸರು ತಡೆದಿದ್ದಾರೆ.
ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ
ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ್ದ ರೈತ ಸಂಘ ಸದಸ್ಯರು ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದರು.
ಸುಮಾರು ಹತ್ತು ಗಂಟೆ ವೇಳೆಗೆ ಬೈಕ್ ಱಲಿ ನಡೆಸಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
Last Updated : Sep 28, 2020, 12:27 PM IST