ತುಮಕೂರು:ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಬೀದಿ ಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳಿಗೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಯಿತು.
ಫುಟ್ಪಾತ್ ಅಂಗಡಿಗಳ ತೆರವು: ಸೂಕ್ತ ಸ್ಥಳ ಕಲ್ಪಿಸುವಂತೆ ವ್ಯಾಪಾರಿಗಳಿಂದ ಮನವಿ - ಮನವಿ
ಫುಟ್ಪಾತ್ ಮೇಲೆ ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವವರ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದರಿಂದ ಅಲ್ಲಿನ ವ್ಯಾಪಾರಸ್ಥರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗೆ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಗಿದೆ.
ಪ್ರಶಾಂತ್ ಥಿಯೇಟರ್ ಮತ್ತು ನಗರದ ಖಾಸಗಿ ಬಸ್ ನಿಲ್ದಾಣದ ಮಧ್ಯೆ ವಿನಾಯಕ ನಗರಕ್ಕೆ ಹಾದುಹೋಗುವ ರಸ್ತೆಯಲ್ಲಿ ಕಳೆದ 15 ವರ್ಷಗಳಿಂದ ಫುಟ್ಪಾತ್ ಮೇಲೆ ಸಣ್ಣಪುಟ್ಟ ಅಂಗಡಿ ಮಳಿಗೆಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವ ಜಾಗವನ್ನು ಏಕಾಏಕಿ ತೆರವುಗೊಳಿಸಿರುವುದರಿಂದ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ಈ ವೇಳೆ ಮಾತನಾಡಿದ ಚಿಲ್ಲರೆ ಹಣ್ಣು ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಖುದ್ದುಸ್ ಅಹಮದ್, ಗುಬ್ಬಿ ವೀರಣ್ಣ ರಂಗಮಂದಿರದ ಬಳಿ ಹದಿನೈದು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಏಕಾಏಕಿ ಮಳಿಗೆಗಳನ್ನು ತೆರವು ಗೊಳಿಸುವುದರ ಮೂಲಕ ನಮ್ಮನ್ನು ಬೀದಿಗೆ ತಳ್ಳುತ್ತಿದ್ದಾರೆ ಎಂದರು.