ತುಮಕೂರು: ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಸಿದ್ಧಗಂಗಾ ಮಠದ ವತಿಯಿಂದ ಮಠದ ಮುಖ್ಯರಸ್ತೆಯಲ್ಲಿರುವ ಯಾತ್ರಿ ನಿವಾಸದಲ್ಲಿ 80 ಹಾಸಿಗೆಯುಳ್ಳ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ.
ಜಿಲ್ಲಾಸ್ಪತ್ರೆಯಿಂದ ಸೂಚಿತಗೊಳ್ಳುವ ಕೋವಿಡ್ ಸೋಂಕಿತರಿಗೆ ಐಸೋಲೇಶನ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿ ನೀಡಲಾಗುವ ಊಟ, ಔಷಧಿ ಸೇರಿದಂತೆ ಪ್ರತಿಯೊಂದು ಸೌಲಭ್ಯವೂ ಉಚಿತವಾಗಿರಲಿದೆ. ಜೊತೆಗೆ ತುರ್ತು ಸಂದರ್ಭದಲ್ಲಿ ಬಳಕೆಯಾಗುವಂತೆ ಸೀಮಿತ ಆಕ್ಸಿಜನ್ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಸೋಮವಾರದಿಂದಲೇ ಸೋಂಕಿತರಿಗೆ ಲಭ್ಯವಾಗಿದೆ.