ತುಮಕೂರು: ಕೋವಿಡ್-19 ಹಿನ್ನೆಲೆ ರಾಜ್ಯದಲ್ಲಿ ಲಾಕ್ಡೌನ್ನಿಂದಾಗಿ ಸಾಮಾನ್ಯ ಹಾಗೂ ಬಡ ವರ್ಗದವರು ಜೀವನ ಸಾಗಿಸಲು ಕಷ್ಟವಾಗಿದೆ. ತೊಂದರೆಗೆ ಸಿಲುಕಿರುವ ಜನರಿಗೆ ಸೂಕ್ತ ರೀತಿಯಲ್ಲಿ ಸರ್ಕಾರ ಸ್ಪಂದಿಸಬೇಕೆಂದು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ( ಮಾರ್ಕ್ಸ್ ವಾದಿ) ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಪ್ರತಿಭಟನೆ
ಸಾಮಾನ್ಯ ವರ್ಗದ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿಯಂತೆ ಆರು ತಿಂಗಳವರೆಗೆ ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಣೆ ಮಾಡಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು. ಹೀಗೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿದೆ.
ವಿವಿಧ ಬೇಡಿಕೆಗಳ ಈಡೇರಿಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಪ್ರತಿಭಟನೆ
ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಎದುರು ಜಮಾವಣೆಗೊಂಡ ಪಕ್ಷದ ಕಾರ್ಯಕರ್ತರು, ಸರ್ಕಾರವು ಬಡ ಹಾಗೂ ಮಧ್ಯಮ ವರ್ಗದವರನ್ನು ಕಡೆಗಣಿಸುತ್ತಿದೆ. ಸಾಮಾನ್ಯ ವರ್ಗದ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿಯಂತೆ ಆರು ತಿಂಗಳವರೆಗೆ ಉಚಿತ ಆಹಾರ ಧಾನ್ಯಗಳನ್ನು ವಿತರಣೆ ಮಾಡಬೇಕು. ಉದ್ಯೋಗ ಖಾತರಿ ಯೋಜನೆ ಅಡಿ ಹೆಚ್ಚಿಸಿದ ಕೂಲಿಯೊಂದಿಗೆ ಕನಿಷ್ಠ ವರ್ಷದಲ್ಲಿ 200 ದಿನಗಳ ಉದ್ಯೋಗ ನೀಡಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.