ತುಮಕೂರು:ನಗರದಲ್ಲಿನ ಚರಂಡಿ ನೀರನ್ನು ಪುನರ್ಬಳಕೆ ಮಾಡಲು ಇಸ್ರೇಲ್ ಸಂಸ್ಥೆ ಮುಂದೆ ಬಂದಿದೆ. ಇದನ್ನು ಬಳಸಿಕೊಂಡು 20 ರಿಂದ 25 ಎಂಎಲ್ಡಿ ನೀರನ್ನು ಶುದ್ಧೀಕರಿಸ ಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ, ಬಳಿಕ ಹೊಸ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಕಾಮಗಾರಿ ವೇಳೆ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೈನಿಕ್ ಬೋರ್ಡ್ಗಳನ್ನು ಅಳವಡಿಸಿ, ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ರಸ್ತೆ ಮತ್ತು ಪುಟ್ಬಾತ್ ನಿರ್ಮಾಣ ಮಾಡಬೇಕು. ನಗರದಲ್ಲಿ ಏಕಕಾಲಕ್ಕೆ ರಸ್ತೆಗಳನ್ನು ಅಗೆದು ಬಿಟ್ಟರೆ ಹೇಗೆ ಎಂದು ಪ್ರಶ್ನಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ರಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿಯಾಗಿರುವ ತೊಡಕುಗಳನ್ನು ಆದಷ್ಟು ಬೇಗ ನಿವಾರಣೆ ಮಾಡಿಕೊಂಡು, ಕಾಮಗಾರಿ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಎಂಜಿನಿಯರ್ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಹಾಜರಿದ್ದ ಸಂಸದ ಜಿ.ಎಸ್. ಬಸವರಾಜು ಮಾತನಾಡಿ. ತುಮಕೂರು ನಗರದಲ್ಲಿ ಒಳಚರಂಡಿ ನೀರಿನಿಂದ ಮೇಳೆಕೋಟೆ ಸೇರಿದಂತೆ ನಗರದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಇದರಿಂದ ತೊಂದರೆ ಆಗಿದೆ. ಈ ಯೋಜನೆಯಿಂದ ಜನರಿಗೆ ಅನುಕೂಲವಾಗಲಿದೆ. ಡಿಜಿಟಲ್ ನರ್ವ ಸಿಸ್ಟಮ್ ಕಾರ್ಯಕ್ರಮವನ್ನು ನಗರದಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ತೆಲುಗು ಡಿಸಿ ಮಾದರಿಯಲ್ಲಿದ್ದ ಜ್ಞಾನವನ್ನು ಬಳಸಿಕೊಂಡು ನಗರದ ಜನರ ಆರೋಗ್ಯ ಸುಧಾರಣೆಗೆ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ನಿರ್ಮಾಣದ ಬಗ್ಗೆ ಸ್ಮಾರ್ಟ್ ಸಿಟಿ ಹಾಗೂ ಕೆಎಸ್ಆರ್ಟಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.