ತುಮಕೂರು: ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ದ್ವೇಷದ ರಾಜಕಾರಣದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ - ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
ಐಟಿ ದಾಳಿ ಮಾಡಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಕೊರಟಗೆರೆಯ ಸರ್ಕಾರಿ ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾಕಾರರು ತಾಲೂಕು ಕಚೇರಿವರೆಗೂ ಮೆರವಣಿಗೆ ನಡೆಸುವ ಮೂಲಕ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದೇ ವೇಳೆ, ಕೇಂದ್ರ ಸರ್ಕಾರ ಮತ್ತು ಐಟಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಮುಖಂಡರ ಧೋರಣೆ ಖಂಡಿಸಿದರು.
TAGGED:
tumkur congress protest news