ತುಮಕೂರು: ಶಿರಾ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆ ಸಂಖ್ಯೆ 179 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಮತ ಚಲಾವಣೆ ಮಾಡಿದರು.
ಶಿರಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಮತದಾನ - ಶಿರಾ ಉಪ ಚುನಾವಣೆ
ಮತಗಟ್ಟೆ ಸಂಖ್ಯೆ 179 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಮತ ಚಲಾವಣೆ ಮಾಡಿದರು. ಇದಕ್ಕೂ ಮುನ್ನ ಶಿರಾ ನಗರದ ಕೋಟೆ ಮಾರಮ್ಮ ದೇವಸ್ಥಾನ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ. ಜಯಚಂದ್ರ ಮತಚಲಾವಣೆ
ಅವರೊಂದಿಗೆ ಪತ್ನಿ ನಿರ್ಮಲಾ ಕೂಡ ಆಗಮಿಸಿ ಹಕ್ಕು ಚಲಾಯಿಸಿದರು. ಇದಕ್ಕೂ ಮುನ್ನ ಶಿರಾ ನಗರದ ಕೋಟೆ ಮಾರಮ್ಮ ದೇವಸ್ಥಾನ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ರಾಘವೇಂದ್ರ ಸ್ವಾಮಿ ದೇಗುಲದಲ್ಲಿ 4 ತುಪ್ಪದ ದೀಪಗಳನ್ನು ಪತ್ನಿ ನಿರ್ಮಲಾ ಅವರೊಂದಿಗೆ ಹಚ್ಚಿದ ಜಯಚಂದ್ರ ಅಲ್ಲಿಂದ ನೇರವಾಗಿ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿದರು.