ತುಮಕೂರು:ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾರ್ಗಮಧ್ಯೆ ಅಪಘಾತದಲ್ಲಿ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ.
ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಡಿಸಿಎಂ ಪರಮೇಶ್ವರ್ - tumkur latest news updates
ರಸ್ತೆಯಲ್ಲಿ ಅಪಘಾತಕ್ಕೀಡಾಗಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮಾನವೀಯತೆ ಮೆರೆದಿದ್ದಾರೆ.

ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಡಿಸಿಎಂ ಪರಮೇಶ್ವರ್
ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಡಿಸಿಎಂ ಪರಮೇಶ್ವರ್
ನಿನ್ನೆ ರಾತ್ರಿ(ಶನಿವಾರ) ಕೊರಟಗೆರೆಯಿಂದ ಬೆಂಗಳೂರಿಗೆ ಡಾ. ಪರಮೇಶ್ವರ್ ಕಾರಿನ ಮೂಲಕ ತೆರಳುತ್ತಿದ್ದರು. ಇದೇ ವೇಳೆ ಭೈರಗೊಂಡ್ಲು ಗ್ರಾಮದ ಹರೀಶ್ ಎಂಬುವರು ಅಪಘಾತಕ್ಕೆ ಒಳಗಾಗಿದ್ದರು. ಕೋಳಾಲ ಗ್ರಾಮದ ಸಮೀಪ ಅಪಘಾತವಾಗಿದ್ದನ್ನು ಕಂಡು ವಾಹನ ನಿಲ್ಲಿಸಿದ ಅವರು, ಕೋಲಾಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರ ಜೀಪಿನಲ್ಲಿಯೇ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು.
ಮಾಜಿ ಉಪಮುಖ್ಯಮಂತ್ರಿಗಳ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.