ತುಮಕೂರು :ಜಿಲ್ಲೆಯ ಕುಣಿಗಲ್ ತಾಲೂಕಿನ ಕಲ್ಲನಾಯಕನಹಳ್ಳಿಯ ಸಮೀಪ ಎರಡು ದ್ವಿಚಕ್ರ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಕಾರ್ಯದ ನಿಮಿತ್ತ ಅದೇ ದಾರಿಯಲ್ಲಿ ಹೋಗುತ್ತಿದ್ದ ಕಾಂಗ್ರೆಸ್ ಶಾಸಕ ಡಾ ರಂಗನಾಥ್ ಅವರು ಗಾಯಗೊಂಡಿದ್ದ ಸವಾರನನ್ನು ತಮ್ಮ ಕಾರಿನಲ್ಲೇ ಕರೆದೊಯ್ದು ತಾವೇ ಚಿಕಿತ್ಸೆ ನೀಡಿದ್ದಾರೆ.
ಬೈಕ್ ಸವಾರನನ್ನು ತುರ್ತು ಚಿಕಿತ್ಸೆಗಾಗಿ ತಕ್ಷಣವೇ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿ ಅವರೇ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿದರು. ನಂತರ ಉನ್ನತ ಮಟ್ಟದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿ ವೈದ್ಯಕೀಯ ಸಲಹೆ ತೆಗೆದುಕೊಳ್ಳುವಂತೆ ಸಲಹೆ ನೀಡಿದರು.